ಆರೋಗ್ಯ ತಪಾಸಣೆಗಾಗಿ ರಾಜ್ ಮಲ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮೂರುವರೆ ತಿಂಗಳ ವನವಾಸ, ಅಣ್ಣಾವ್ರ ದೈಹಿಕ ಸ್ಥಿತಿಯ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು , ವಿಶೇಷ ತಪಾಸಣೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಯಾಂದಕ್ಕೆ ಸೇರಿಸಲಾಗಿದೆ ಎಂದು ರಾಜ್ ಅವರ ಕುಟುಂಬ ವೈದ್ಯ ಡಾ. ರಮಣ ರಾವ್ ಹೇಳಿದ್ದಾರೆ.
ಶನಿವಾರ ಬೆಳಿಗ್ಗೆ ರಾಜ್ಕುಮಾರ್ ಅವರನ್ನು ಮಲ್ಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಎರಡು ದಿನಗಳ ಕಾಲ ಅವರನ್ನು ತಜ್ಞ ವೈದ್ಯರು ವಿಶೇಷ ತಪಾಸಣೆಗೆ ಒಳಪಡಿಸುವರು ಎಂದು ರಮಣ ರಾವ್ ಹೇಳಿದ್ದಾರೆ. ಕಾಡಿನಲ್ಲಿ ಕ್ರಿಮಿ ಕೀಟಗಳು, ಸೊಳ್ಳೆ ಕಡಿತದಿಂದಾಗಿ ಉಂಟಾಗಿರುವ ಗಾಯಗಳಿಗೆ ರಮಣ ರಾವ್ ಅವರೇ ಪ್ರಥಮ ಚಿಕಿತ್ಸೆ ನೀಡಿದ್ದರು. ನಂತರ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಕಣ್ಣಿನ ತಪಾಸಣೆ ಮುಗಿದಿದ್ದು, ಅವರ ದೃಷ್ಟಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ತಪಾಸಣೆ ಮಲ್ಯ ಆಸ್ಪತ್ರೆಯಲ್ಲಿ ನಡೆಯಲಿದೆ.
73ರಲ್ಲೂ ಗಟ್ಟಿ ಮುಟ್ಟಾಗಿರುವ ರಾಜ್ : ವೀರಪ್ಪನ್ಒತ್ತೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಗಪ್ಪ ವೈದ್ಯಕೀಯ ಉಪಚಾರ ಪಡೆದ ನಂತರವಷ್ಟೇ ಇತರರೊಂದಿಗೆ ಮಾತನಾಡುವುದು ಸಾಧ್ಯವಾಗಿತ್ತು. ಅನಾರೋಗ್ಯದ ಕಾರಣದಿಂದಲೇ ವೀರಪ್ಪನ್ ಸೆರೆಯಿಂದ ಪಾರಾಗಿ ಬಂದಿದ್ದ ಗೋವಿಂದರಾಜು ಆಸ್ಪತ್ರೆಯಲ್ಲಿ ಸ್ವಲ್ಪ ಕಾಲ ಚಿಕಿತ್ಸೆ ಪಡೆದಿದ್ದರು. ಇವರಿಬ್ಬರಿಗೂ ಹೋಲಿಸಿದಲ್ಲಿ 73 ರ ವಯಸ್ಸಿನ ರಾಜ್ ಕುಮಾರ್ ಅವರು ಯೋಗ ಶಕ್ತಿಯಿಂದ ತಮ್ಮ ಆರೋಗ್ಯವನ್ನು ಚೆನ್ನಾಗಿಯೇ ಕಾಪಾಡಿಕೊಂಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ರಾಜ್ ಬಿಡುಗಡೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications