ತಡೆಯಾಜ್ಞೆ ತೆರವಾದೊಡನೆ ರಾಜ್ಯದದೇವರಿಗೆ ಕನ್ನಡದಲ್ಲೇ ಪೂಜೆ
ಬೆಂಗಳೂರು : ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ ತೆರವಾಗುತ್ತಿದ್ದಂತೆಯೇ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ದೇವರಿಗೆ ಕನ್ನಡದಲ್ಲಿಯೇ ಪೂಜೆ ನಡೆಸಲಾಗುವುದು ಎಂದು ಮುಜರಾಯಿ ಖಾತೆ ಸಚಿವ ಬಾಬೂರಾವ್ ಚಿಂಚನ್‌ಸೂರ್ ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದ ಎಲ್ಲ ದೇವಾಲಯಗಳಲ್ಲೂ ನಮ್ಮದೇ ಆದ ಸರಳ ಸುಂದರ ಕನ್ನಡ ಭಾಷೆಯಲ್ಲಿ ಪೂಜೆ ನಡೆಯಬೇಕೆಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಅದರಂತೆ ನಾವು ಆಗಮ ಸಲಹಾ ಸಮಿತಿಯನ್ನೂ ರಚಿಸಿದ್ದೇವೆ. ಆದರೆ, ಈ ಸಮಿತಿ ಕಾರ್ಯ ನಿರ್ವಹಿಸದಂತೆ ತಡೆಯಾಜ್ಞೆ ಇರುವುದರಿಂದ, ವ್ಯವಸ್ಥೆಯನ್ನು ಜಾರಿಗೆ ತರಲು ಸಾಧ್ಯವಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ 43,217 ದೇವಸ್ಥಾನಗಳಿವೆ. 22,887 ಮಂದಿ ಅರ್ಚಕರಿದ್ದಾರೆ. ಇವರಲ್ಲಿ 427 ಜನ ಪರಿಶಿಷ್ಟ ಜಾತಿ ಹಾಗೂ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದ ಅವರು, ದಲಿತ ಅರ್ಚಕರ ಸಂಖ್ಯೆ ಹೆಚ್ಚಿಸಲು ದಲಿತರಿಗೆ ಆಗಮ ಶಾಸ್ತ್ರ ಕಲಿಸಬೇಕಾಗಿದೆ ಎಂದೂ ತಿಳಿಸಿದರು. ಮೂರು ವರ್ಷಗಳ ಆಗಮಾಧ್ಯಯನಕ್ಕೆ ಬದಲಾಗಿ ಅಲ್ಪಾವಧಿಯ ತರಬೇತಿ ನೀಡುವ ಉದ್ದೇಶವೂ ಇದೆ. ಇದಕ್ಕಾಗಿಯೇ ಆಗಮ ವಿದ್ಯಾ ಸಂಸ್ಥೆ ರಚಿಸಲಾಗುವುದು, ಅರ್ಚಕರಿಗೆ ಹೆಚ್ಚು ಗೌರವ ಧನ ನೀಡಲು ಏಕರೂಪದ ಶಾಸನ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಶಾಸಕ ಸಿದ್ದಲಿಂಗಯ್ಯ ಅವರಿಗೆ ಮೇಲ್ಮನೆಯಲ್ಲಿ ನೀಡಿದ ಉತ್ತರದಲ್ಲಿ ತಿಳಿಸಿದರು.
ಹೆಣ್ಣು ದೇವರುಗಳಿಗೆ ಪೂಜೆ ಮಾಡಲು ಮಹಿಳಾ ಅರ್ಚಕರ ನೇಮಕ ಮಾಡಬೇಕು ಎಂಬ ಸಲಹೆಯೂ ಎಸ್. ಚನ್ನ ಬಸವಯ್ಯ ಅವರಿಂದ ಬಂತು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications