ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಸೆಪ್ಲಿಮೆಂಟರಿ ಪರೀಕ್ಷೆ ಫಲಿತಾಂಶ ಪ್ರಕಟ

By Staff
|
Google Oneindia Kannada News

ಬೆಂಗಳೂರು : ಅಕ್ಟೋಬರ್‌ ತಿಂಗಳಿನಲ್ಲಿ ಪರೀಕ್ಷಾ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಸಪ್ಲಿಮೆಂಟರಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಸೆಪ್ಲಿಮೆಂಟರಿ ಪರೀಕ್ಷೆಯಲ್ಲಿ ಪ್ರತಿಶತ 15.79ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. 1,59,010 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ 24,961 ವಿದ್ಯಾರ್ಥಿಗಳು ಮಾತ್ರ ಪಾಸಾಗಿದ್ದಾರೆ. 1ಲಕ್ಷ 9ಸಾವಿರದ 921 ಬಾಲಕರ ಪೈಕಿ 16ಸಾವಿರದ 257 ವಿದ್ಯಾರ್ಥಿಗಳೂ, 49ಸಾವಿರದ 89 ವಿದ್ಯಾರ್ಥಿನಿಯರ ಪೈಕಿ 8,704 ಬಾಲಕಿಯರೂ ಪಾಸಾಗಿದ್ದಾರೆ.

ಶನಿವಾರ ಬೆಳಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಅಂಕಗಳ ಮರುಎಣಿಕೆಗೆ ಅವಕಾಶ ಇದ್ದು, ಗಣಿತ ವಿಷಯದ ಉತ್ತರ ಪತ್ರಿಕೆಯ ಛಾಯಾಪ್ರತಿ ಪಡೆಯಲು ಹಾಗೂ ಮರುಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅದಕ್ಕೆ ಇಂದಿನಿಂದ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆ ಪಡೆದು, ಶುಲ್ಕ ತುಂಬಿ ಅರ್ಜಿ ಸಲ್ಲಿಸಬಹುದು ಎಂದು ಮಂಡಳಿ ತಿಳಿಸಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X