ವೀರಪ್ಪನ್ ಕಾರ್ಯಾಚರಣೆಗೆ ರಾಜ್ಯ ಸಿದ್ಧವಾಗಿದೆ - ಎಸ್.ಎಂ.ಕೃಷ್ಣ
ನವದೆಹಲಿ : ವೀರಪ್ಪನ್ ಬಂಧನದ ಕಾರ್ಯಾಚಾರಣೆಯನ್ನು ಮತ್ತೆ ಆರಂಭಿಸಲು ವಿಶೇಷ ಕಾರ್ಯಾಚರಣೆ ಪಡೆ ಎಸ್‌ಟಿಎಫ್‌ಗೆ ಆದೇಶ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ವೀರಪ್ಪನ್‌ನನ್ನು ಹಿಡಿಯಲು ಪೊಲೀಸ್ ಇಲಾಖೆ, ಗುಪ್ತ ದಳ ವಿಭಾಗ , ಅರಣ್ಯ ಚೆಕ್ ಪೋಸ್ಟ್ ಎಲ್ಲವೂ ಸಿದ್ಧವಾಗಿದ್ದು, ಕೇಂದ್ರದ ನೆರವು ಪಡೆಯುವ ಬಗ್ಗೆ ವಿರೋಧ ಪಕ್ಷಗಳ ಜೊತೆಗೆ ಚರ್ಚಿಸಿ, ನಿರ್ಧಾರಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ಶುಕ್ರವಾರದ ಸುದ್ದಿ ಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ ಕುಮಾರ್ ಬಿಡುಗಡೆಯಾಗಿ ಎರಡು ದಿನಾವಾದರೂ ಕಾರ್ಯಾಚರಣೆ ಯಾಕೆ ಆರಂಭಿಸಿಲ್ಲ ಎಂಬ ಪ್ರಶ್ನೆಗೆ ಅವರು ವೀರಪ್ಪನ್, ರಾಜ್ ಅವರನ್ನು ಬಿಡುಗಡೆ ಮಾಡಿದ ನಂತರ ಕರ್ನಾಟಕದ ಅರಣ್ಯ ಪ್ರದೇಶದಲ್ಲಿಯೇ ಇದ್ದಾನೆ ಎಂದು ನಂಬುವುದು ಹೇಗೆ? ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿದ್ದರೆ ತಮಿಳು ನಾಡು ಸರಕಾರದ ಜೊತೆ ಸಮಾಲೋಚಿಸಿ ಜಂಟಿ ಕಾರ್ಯಾಚರಣೆ ನಡೆಸಬೇಕಾಗುತ್ತದೆ. ಕೇಂದ್ರ ವಾಣಿಜ್ಯ ಸಚಿವ ಮುರಸೋಳಿ ಮಾರನ್ ಅವರ ಆರೋಗ್ಯ ವಿಚಾರಿಸಲು ಶನಿವಾರದಂದು ತಾವು ಚೆನ್ನೈಗೆ ತೆರಳಲಿದ್ದು, ಇದೇ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಕರುಣಾ ನಿಧಿ ಅವರೊಂದಿಗೆ ವೀರಪ್ಪನ್ ಕಾರ್ಯಾಚರಣೆ ಕುರಿತು ಮಾತು ಕತೆ ನಡೆಸುವುದಾಗಿ ಅವರು ಉತ್ತರಿಸಿದರು.
ಬೆಂಗಳೂರಿನ ತಮಿಳರು ರಾಜ್ ಬಿಡುಗಡೆಗೆ ಪ್ರಯತ್ನಿಸಿರುವುದಾಗಲಿ, ವೈದ್ಯೆ ಭಾನು ಸಂಧಾನಕಾರರೊಂದಿಗೆ ವೀರಪ್ಪನ್ ಅಡಗುದಾಣಕ್ಕೆ ತೆರಳಿರುವ ಬಗ್ಗೆಯಾಗಲೀ ಸರಕಾರಕ್ಕೆ ಯಾವುದೇ ಮಾಹಿತಿ ಇರಲಿಲ್ಲ ಎಂದ ಕೃಷ್ಣ ವೀರಪ್ಪನ್ ಕಾರ್ಯಾಚರಣೆ ಮತ್ತು ರಾಜ್ ಬಿಡುಗಡೆಯ ಕುರಿತು ವಿಧಾನ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಲು ಅವಕಾಶ ಒದಗಿಸುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ರಾಜ್ ಬಿಡುಗಡೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications