ರಂಗ ನಿರ್ದೇಶಕ ಪ್ರಸನ್ನರಿಗೆ ಕೇಂದ್ರ ಸಂಗೀತ-ನಾಟಕ ಅಕಾಡೆಮಿ ಪ್ರಶಸ್ತಿ
ನವದೆಹಲಿ : ಕರ್ನಾಟಕದ ಪ್ರಸಿದ್ಧ ರಂಗ ನಿರ್ದೇಶಕ ಪ್ರಸನ್ನ ಮತ್ತು ಸೂತ್ರದ ಗೊಂಬೆಯಾಟದ ಬಿ.ಎಚ್. ಪುಟ್ಟ ಸ್ವಾಮಿ ಆಚಾರ್ ಸೇರಿದಂತೆ 47 ಮಂದಿ ಕಲಾವಿದರಿಗೆ ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿಯು ಪ್ರಸಕ್ತ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ರಂಗಭೂಮಿ ನಿರ್ದೇಶಕ ಪ್ರಸನ್ನ ಅವರ ರಂಗಭೂಮಿಯ ಶ್ರೇಷ್ಠ ಸಾಧನೆಯನ್ನು ಗುರುತಿಸಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು , ಸೂತ್ರದ ಗೊಂಬೆಯಾಟದ ಕಲಾವಿದ ಬಿ.ಎಚ್ ಪುಟ್ಟ ಸ್ವಾಮಿ ಆಚಾರ್ ಅವರು ಕಲಾಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಸಿ ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ನೀಡುವ ಪುರಸ್ಕಾರಕ್ಕೆ ಗಾಯಕ ಟಿ. ಎನ್. ಶೇಷ ಗೋಪಾಲನ್ ಅವರನ್ನು ಆರಿಸಲಾಗಿದೆ.
ಮೂವರು ರಂಗಭೂಮಿ ಕಲಾವಿದರಿಗೆ ಸಾರ್ವಕಾಲಿಕ ಜೀವನ ಶ್ರೇಷ್ಠ ಸಾಧನೆಯ ಪುರಸ್ಕಾರ ನೀಡಲಾಗಿದ್ದು, ಬಿ.ವಿ.ಕೆ ಶಾಸ್ತ್ರಿ ಸರ್ಬ್ಜಿತ್ಸಿಂಗ್ ಮತ್ತು ನೇಮಿ ಚಂದ್ ಅವರಿಗೆ ಸಮಗ್ರ ಕಲಾ ಪ್ರಶಸ್ತಿ ನೀಡಲಾಗುವುದು. ಶೇಖರ್ ಕಪೂರ್ ಅವರ ಬ್ಯಾಂಡಿಟ್ ಕ್ವೀನ್ಚಿತ್ರದ ನಾಯಕಿ ಸೀಮಾ ಬಿಸ್ವಾಸ್, ನಿರ್ದೇಶಕಿ ನಾಡಿರಾ ಝಾಹಿರ್ ಬಬ್ಬರ್ ಅವರ ಹೆಸರೂ ಪ್ರಶಸ್ತಿ ಪಟ್ಟಿಯಲ್ಲಿದೆ. ಸಂಗೀತಕ್ಕಾಗಿ ನೀಡುವ ಪ್ರಶಸ್ತಿಯನ್ನು ಹಿಂದೂಸ್ಥಾನಿ ಗಾಯಕ, ಜಯ್ ಚಕ್ರವರ್ತಿ ಮತ್ತು ಸಿತಾರ್ ವಾದಕ ರಾಜೀವ್ ತಾರಾನಾಥ್ ಪಡೆದಿದ್ದಾರೆ.
(ಇನ್ಫೋ ವಾರ್ತೆ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications