ವೀರಪ್ಪನ್ ಕಾರ್ಯಾಚರಣೆ : ಸೋಮವಾರ ಪ್ರತಿಪಕ್ಷಗಳ ನಾಯಕರ ಸಭೆ
ಬೆಂಗಳೂರು : ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೋಮವಾರ ಸಂಜೆ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ನಡೆದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಈ ವಿಷಯವನ್ನು ತಿಳಿಸಿದರು. ಕಾರ್ಯಾಚರಣೆಯನ್ನು ಯಾವಾಗ ಪ್ರಾರಂಭಿಸಲಾಗುವುದು ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಕಾರ್ಯಾಚರಣೆ ಕುರಿತ ವಿವರವಾದ ಹೇಳಿಕೆಯನ್ನು ಸದನದಲ್ಲಿ ಪ್ರಕಟಿಸುವುದಾಗಿ ಹೇಳಿದರು. ಕಾರ್ಯಾಚರಣೆಯಲ್ಲಿ ಕೇಂದ್ರದ ನೆರವನ್ನು ಕೋರುವ ವಿಷಯದ ಬಗ್ಗೆಯೂ ಸದನದಲ್ಲಿ ತಿಳಿಸುವುದಾಗಿ ಹೇಳಿದರು.
ರಾಜ್ ಆಸ್ಪತ್ರೆಯಿಂದ ಮನೆಗೆ : ಶನಿವಾರ ಮಲ್ಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದ ರಾಜ್ಕುಮಾರ್ ಅವರು ಅಂದೇ ಮನೆಗೆ ವಾಪಸ್ಸಾಗಿದ್ದಾರೆ. ಇಸಿಜಿ, ಎಕೋ ಹಾಗೂ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಗಾದ ರಾಜ್ ಸಂಪೂರ್ಣ ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವನವಾಸದಿಂದ ರಾಜ್ ಅವರು ಸುಮಾರು ನಾಲ್ಕೂವರೆ ಕೆಜಿ ತೂಕ ಕಳೆದುಕೊಂಡಿದ್ದಾರೆ ಹಾಗೂ ಅವರ ಚರ್ಮ ಬಿಸಿಲಿಗೆ ಸುಟ್ಟು ಕಪ್ಪಗಾಗಿದೆ. ಎರಡು ಮೂರು ವಾರಗಳಲ್ಲಿ ಈ ತೊಂದರೆಗಳು ಪರಿಹಾರವಾಗುತ್ತವೆ ಎಂದು ವೈದ್ಯರು ಹೇಳಿದ್ದಾರೆ.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಬಿಡುಗಡೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications