ಕರ್ನಾಟಕ ಪೊಲೀಸರು ಕಾರ್ಯಾಚರಣೆಗೆ ರೆಡಿ
ಬೆಂಗಳೂರು : ರಾಜ್‌ಕುಮಾರ್ ಅಪಹರಣದ ನಂತರ ಸ್ಥಗಿತ ಗೊಂಡಿದ್ದ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಕರ್ನಾಟಕ ಪೊಲೀಸರು ಸಿದ್ಧವಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಹೇಳಿದ್ದಾರೆ.
ಕಾರ್ಯಾಚರಣೆ ಪ್ರಾರಂಭಕ್ಕೆ ನಾವು ಸಂಪೂರ್ಣ ಸನ್ನದ್ಧವಾಗಿದ್ದೇವೆ. ಆದರೆ, ಕಾರ್ಯಾಚರಣೆ ಆರಂಭಗೊಳ್ಳಲು ಕೆಲ ಸಮಯ ಬೇಕಾಗಬಹುದು ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದಿನಕರ್ ತಿಳಿಸಿದರು. ಈ ಬಗ್ಗೆ ತಮಿಳುನಾಡಿನ ಧೋರಣೆ ಇನ್ನೂ ಸ್ಪಷ್ಟವಾಗಿಲ್ಲ . ಬೆಳವಣಿಗೆಗಳನ್ನು ಕಾದು ನೋಡಿ ನಂತರ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು ಎಂದು ಅವರು ಹೇಳಿದರು.
ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ರಾಜಕೀಯ ನಡೆಯುತ್ತಿದೆ ಎನ್ನುವ ವದಂತಿಗಳನ್ನು ತಳ್ಳಿ ಹಾಕಿದ ಅವರು, ಈ ಸಂಬಂಧ ತಾವು ಯಾವುದೇ ಒತ್ತಡಕ್ಕೊಳಗಾಗಿಲ್ಲ ಎಂದರು. ಉಭಯ ರಾಜ್ಯಗಳ ಕಾರ್ಯಾಚರಣೆ ಸ್ವರೂಪ ಕುರಿತಂತೆ ಉತ್ತರಿಸಲು ನಿರಾಕರಿಸಿದ ದಿನಕರ್, ಆ ಬಗ್ಗೆ ಹೇಳಲು ಕಾಲ ಪಕ್ವವಾಗಿಲ್ಲ ಎಂದರು.
ಸಹಾಯಕ್ಕೆ ನಾವು ಸಿದ್ಧ - ಅದ್ವಾನಿ : ಮುಂಬಯಿಯ ಸುದ್ದಿಗೋಷ್ಠಿಯಾಂದರಲ್ಲಿ ಮಾತನಾಡುತ್ತಿದ್ದ ಕೇಂದ್ರ ಗೃಹ ಸಚಿವ ಎಲ್.ಕೆ. ಅದ್ವಾನಿ ಅವರು, ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ಯಾವುದೇ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದ್ದಾರೆ. ಪ್ರಕರಣದ ಬಗ್ಗೆ ಅವರು ಮಾತನಾಡುತ್ತಿರುವುದು ಇದೇ ಮೊದಲು. ಆದರೆ, ಪ್ರಕರಣವನ್ನು ಯಾವ ರೀತಿ ಮುಂದುವರಿಸಬೇಕೆನ್ನುವುದು ರಾಜ್ಯ ಸರ್ಕಾರಗಳಿಗೆ ಬಿಟ್ಟ ವಿಷಯ ಎಂದಿದ್ದಾರೆ.
(ಯುಎಎನ್‌ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಬಿಡುಗಡೆ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications