ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ನಾವೂ ಸಿದ್ಧ - ಕರುಣಾನಿಧಿ
ಚೆನ್ನೈ : ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ತಮಿಳುನಾಡು ವಿಶೇಷ ಕಾರ್ಯಪಡೆ ಸನ್ನದ್ಧವಾಗಿದೆ ಎಂದು ಈವರೆಗೆ ಕಾರ್ಯಾಚರಣೆ ಕುರಿತು ಮೌನವಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಸೋಮವಾರ ಪ್ರಕಟಿಸಿದ್ದಾರೆ.
ಐಜಿ ಬಾಲಚಂದ್ರನ್ ನೇತೃತ್ವದಲ್ಲಿ ಕಾರ್ಯಪಡೆ ಸಿದ್ಧವಾಗಿದೆ. ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಹೇಳಿದರು. ಅಗತ್ಯ ಬಿದ್ದಲ್ಲಿ ಉಭಯ ರಾಜ್ಯಗಳು ಕೇಂದ್ರ ಸರ್ಕಾರದ ನೆರವನ್ನು ಕೋರುತ್ತವೆ ಎಂದರು.
ವಿಶೇಷ ಕಾರ್ಯಪಡೆಯನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾರ್ಯಪಡೆಗೆ ಮತ್ತಷ್ಟು ಪೊಲೀಸ್ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿ ಮೂಲ ದಳದ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಗೆ ಮುನ್ನ ಮುಖ್ಯ ಕಾರ್ಯದರ್ಶಿ ಎ.ಪಿ. ಮುತ್ತುಸ್ವಾಮಿ, ಗೃಹ ಕಾರ್ಯದರ್ಶಿ ಶಾಂತಾ ಶೀಲಾ ನಯ್ಯರ್, ಡಿಜಿಪಿ ಆರ್. ರಾಜಗೋಪಾಲನ್, ಎಡಿಜಿಪಿ ಎ.ಎಕ್ಸ್. ಅಲೆಕ್ಸಾಂಡರ್ ಮತ್ತು ಗುಪ್ತದಳದ ಐಜಿಪಿ ರಾಮಾನುಜಂ ಅವರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಕರುಣಾನಿಧಿ ಭಾಗವಹಿಸಿದ್ದರು.
ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ಕರ್ನಾಟಕದ ವಿಶೇಷ ಕಾರ್ಯಪಡೆ ಈಗಾಗಲೇ ಸಿದ್ಧವಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಭಾನುವಾರದ ಸುದ್ದಿಗೋಷ್ಠಿಯಲ್ಲಿ ನಾವು ಕಾರ್ಯಾಚರಣೆಗೆ ಸಿದ್ಧ . ಈ ಕುರಿತು ತಮಿಳುನಾಡು ಸರ್ಕಾರದ ಧೋರಣೆಯನ್ನು ಕಾದು ನೋಡುತ್ತಿದ್ದೇವೆ ಎಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಸಿ.ದಿನಕರ್ ಹೇಳಿದ್ದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಬಿಡುಗಡೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications