ಗೆದ್ದ ಮಮತಾ : ಸೀಮೆಎಣ್ಣೆ, ಅಡುಗೆ ಅನಿಲ ಬೆಲೆ ತುಸು ಇಳಿಕೆ
ನವದೆಹಲಿ : ತೃಣಮೂಲ ಕಾಂಗ್ರೆಸ್‌ನ ನಾಯಕಿ ಮಮತಾ ಬ್ಯಾನರ್ಜಿ ಅವರ ರಾಜಿನಾಮೆ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುವ ಮುನ್ನಾದಿನ ಅಡುಗೆ ಅನಿಲ ಮತ್ತು ಸೀಮೆ ಎಣ್ಣೆ ಬೆಲೆಗಳನ್ನು ಭಾಗಶಃ ಇಳಿಸಿದೆ.
ಸೀಮೆಎಣ್ಣೆ ಬೆಲೆಯನ್ನು ಲೀಟರ್‌ಗೆ ಒಂದು ರುಪಾಯಿಯಂತೆ ಹಾಗೂ ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 10 ರುಪಾಯಿಯಂತೆ ಇಳಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆದರೆ, ಇಳಿಕೆಯ ಹೊಸ ಬೆಲೆಗಳು ಎಂದಿನಿಂದ ಜಾರಿಗೆ ಬರುತ್ತವೆ ಎನ್ನುವುದನ್ನು ಅವರು ತಿಳಿಸಲಿಲ್ಲ .
ಸೋಮವಾರದಿಂದ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ಪ್ರಧಾನಿ ವಾಜಪೇಯಿ ಅವರು ಬೆಲೆ ಇಳಿಕೆಯ ನಿರ್ಧಾರವನ್ನು ಪ್ರಕಟಿಸಿದರು ಎಂದು ಫರ್ನಾಂಡಿಸ್ ಹೇಳಿದರು. ಬೆಲೆ ಇಳಿಕೆ ಕುರಿತ ಹೇಳಿಕೆಯನ್ನು ಇಂಧನ ಖಾತೆ ಸಚಿವ ರಾಮ್ ನಾಯ್ಕ್ ಅವರು ಮಂಗಳವಾರ ಸದನದಲ್ಲಿ ನೀಡಲಿದ್ದಾರೆ.
ಹೋರಾಟಕ್ಕೆ ಸಂದ ಜಯ : ಅಡುಗೆ ಅನಿಲ ಮತ್ತು ಸೀಮೆಎಣ್ಣೆ ಬೆಲೆಗಳ ಇಳಿಕೆಯ ಕೇಂದ್ರ ಸರ್ಕಾರದ ನಿರ್ಧಾರವನ್ನು ಜನ ಸಾಮಾನ್ಯರ ಹಿತಕ್ಕಾಗಿ ಮಮತಾ ಬ್ಯಾನರ್ಜಿ ನಡೆಸಿದ ಹೋರಾಟಕ್ಕೆ ಸಂದ ಜಯ ಎಂದು ತೃಣಮೂಲ ಕಾಂಗ್ರೆಸ್ಸಿನ ಹಿರಿಯ ನಾಯಕ ಸುಬ್ರತೊ ಮುಖರ್ಜಿ ಬಣ್ಣಿಸಿದ್ದಾರೆ. ಆದರೆ, ಭಾಗಶಃ ಬೆಲೆ ಇಳಿಕೆಯ ಕ್ರಮವನ್ನು, ಕೇಂದ್ರ ಸರ್ಕಾರ ಜನತೆಗೆ ಮಾಡಿದ ಮೋಸ ಎಂದು ಸಿಪಿಎಂ ಪಕ್ಷದ ಪಶ್ಚಿಮ ಬಂಗಾಳದ ರಾಜ್ಯ ಘಟಕ ಟೀಕಿಸಿದೆ.
ಅಡುಗೆ ಅನಿಲ ಮತ್ತು ಸೀಮೆ ಎಣ್ಣೆ ಬೆಲೆ ಇಳಿಕೆಯಿಂದಾಗಿ ದೇಶದ ತೈಲ ನಿಧಿ ಕೊರತೆಗೆ ಪ್ರತಿ ತಿಂಗಳೂ 139 ಕೋಟಿ ರುಪಾಯಿಗಳಷ್ಟು ಹೆಚ್ಚುವರಿ ಹೊರೆ ಬೀಳಲಿದೆ.
(ಯುಎನ್‌ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications