ಸಾಂಗ್ಲಿಯಾನರ ಕೈ ಬಲಪಡಿಸಲು ಶಂಕರ್ ಬಿದರಿ,ಕೆಂಪಯ್ಯ ಸೇರ್ಪಡೆ
ಬೆಂಗಳೂರು : ವೀರಪ್ಪನ್ ವಿರುದ್ಧದ ವಿಶೇಷ ಕಾರ್ಯಾಚರಣೆ ಪಡೆಯ ಬಲ ಹೆಚ್ಚಿಸಿರುವ ಕರ್ನಾಟಕ ಸರಕಾರ, ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿಯನ್ನು ಹೊತ್ತಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಚ್. ಟಿ. ಸಾಂಗ್ಲಿಯಾನ ಅವರ ಕೈ ಬಲಪಡಿಸಿದೆ. ಈ ಸಂಬಂಧ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಅನುಭವ ಹೊಂದಿರುವ ಐಜಿಪಿ ಶಂಕರ ಬಿದರಿ ಹಾಗೂ ಉಪ ಐಜಿಪಿ ಕೆಂಪಯ್ಯ ಅವರನ್ನು ಕಾರ್ಯಾಚರಣೆ ಪಡೆಗೆ ಸೇರ್ಪಡೆ ಮಾಡಿದೆ.
ಕಾರ್ಯಾಚರಣೆ ಪಡೆಯಲ್ಲಿ ಹಾಲಿ ಮುಖ್ಯಸ್ಥರಾಗಿರುವ ಹರ್ಷವರ್ಧನರಾಜು ಅವರು ಸಹ ತಮ್ಮ ಹುದ್ದೆಯಲ್ಲೇ ಮುಂದುವರಿಯಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಈ ಹಿಂದೆ ಪ್ರಮುಖ ಪಾತ್ರ ವಹಿಸಿದ್ದ ಶಂಕರಬಿದರಿ ವೀರಪ್ಪನ್ ಸಹಚರರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಲು ಕಾರಣರಾಗಿದ್ದರು.
14 ವರ್ಷಗಳ ವೀರಪ್ಪನ್ ವಿಕಟಾಟ್ಟಹಾಸ ಹತ್ತಿಕ್ಕಲು ಕರ್ನಾಟಕ ಸರಕಾರ ಹಾಗೂ ತಮಿಳುನಾಡು ಸರಕಾರಗಳು ವಿಫಲವಾಗಿವೆ ಎಂದು ಸರ್ವೋನ್ನತ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು. ಈಗ ಕನ್ನಡದ ಮೇರು ನಟ ರಾಜ್ಕುಮಾರ್ ಸುರಕ್ಷಿತವಾಗಿ ಬಿಡುಗಡೆಯಾಗುತ್ತಿದ್ದಂತೆ, ವೀರಪ್ಪನ್ ಶಿಕಾರಿಗೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಜನಸಾಮಾನ್ಯರ ವಿಶ್ವಾಸಕ್ಕೆ ಪಾತ್ರವಾಗಲು ರಾಜ್ಯ ಸರಕಾರಕ್ಕೆ ಈ ಕಾರ್ಯಾಚರಣೆ ಅನಿವಾರ್ಯವಾಗಿದೆ.
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications