ಪ್ರಾದೇಶಿಕ ಸಮತೋಲನಕ್ಕೆ ಅತಿ ಶೀಘ್ರದಲ್ಲೇಸಾಂಸ್ಕೃತಿಕ ನೀತಿ ಜಾರಿ
ಗುಲ್ಬರ್ಗಾ : ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಹಾಗೂ ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಾಂಸ್ಕೃತಿಕ ನೀತಿಯಾಂದನ್ನು ಶೀಘ್ರವೇ ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ನಗರಕ್ಕೆ ಬಂದಿರುವ ಸಚಿವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಔಪಚಾರಿಕವಾಗಿ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಹೊಸ ಸಾಂಸ್ಕೃತಿಕ ನೀತಿಯ ಜಾರಿಗೆ ಈಗಾಗಲೇ ಸದನದಲ್ಲಿ ಹಾಗೂ ವಿವಿಧ ಇಲಾಖೆಗಳ ಹಾಗೂ ಪ್ರಾಧಿಕಾರಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.
ಚಿಂತಕರ ಚಾವಡಿ : ಹೊಸ ನೀತಿಯ ಸಾಧಕ - ಭಾದಕಗಳ ಬಗ್ಗೆ ಚಿಂತಿನ - ಮಂಥನ ನಡೆಸಲು ಚಿಂತಕರ ಚಾವಡಿ ರಚಿಸಲಾಗಿದೆ ಎಂದೂ ತಿಳಿಸಿದರು. ಯುವಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಯುವಪ್ರಶಸ್ತಿ ಹಾಗೂ ಕಿಶೋರ ಪ್ರಶಸ್ತಿಗಳನ್ನು ಕೂಡ ಸಂಸ್ಕೃತಿ ಇಲಾಖೆ ಅನುಷ್ಠಾನಕ್ಕೆ ತರಲಿದೆ ಎಂದರು.
ಜಿಲ್ಲಾ ಉತ್ಸವ : ಕರ್ನಾಟಕದ ಎಲ್ಲ ಜಿಲ್ಲೆಗಳ ಇತಿಹಾಸ ಹಾಗೂ ಪರಂಪರೆಯನ್ನು ಬಿಂಬಿಸುವ ಶೀರ್ಷಿಕೆಗಳನ್ನೊಳಗೊಂಡ ಜಿಲ್ಲಾ ಉತ್ಸವಗಳನ್ನು ನಡೆಸುವ ಉದ್ದೇಶ ಸರಕಾರಕ್ಕಿದೆ. ಇದಕ್ಕಾಗಿ ಈಗಾಗಲೇ ಸಲಕ ಸಿದ್ಧತೆಗಳೂ ನಡೆಯುತ್ತಿವೆ. ಜಿಲ್ಲಾಧಿಕಾರಿಗಳೊಂದಿಗೂ ಈ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದ ಅವರು, ಪ್ರತಿ ಜಿಲ್ಲೆಗೂ ಉತ್ಸವಕ್ಕಾಗಿ 50 ಸಾವಿರ ರುಪಾಯಿ ಮಂಜೂರು ಮಾಡಲಾಗುವುದು ಎಂದೂ ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications