ಮುಕ್ತ ವಿವಿಯಿಂದ ಉದ್ಯೋಗಸ್ಥರಿಗಾಗಿಕಂಪ್ಯೂಟರ್ ಹಾಗೂ ಐಟಿ ಕೋರ್ಸ್
ಮೈಸೂರು : ಕಲಿಯಲು ಆಸಕ್ತಿ ಹೊಂದಿರುವ ಉದ್ಯೋಗಸ್ಥರಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯವು ಮೊದಲ ಬಾರಿಗೆ ಕಂಪ್ಯೂಟರ್ ಹಾಗೂ ಮಾಹಿತಿ ತಂತ್ರಜ್ಞಾನದ ಸಂಜೆ ತರಗತಿಗಳನ್ನು ಪ್ರಾರಂಭಿಸಿದೆ.
ಬೆಂಗಳೂರಿನ ವರ್ಚುಯಲ್ ಎಜುಕೇಷನ್ ಸಂಸ್ಥೆ ಮತ್ತು ಮಣಿಪಾಲದ ಮಾಹೆ (ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್)ಯ ಜಂಟಿ ಸಹಯೋಗದೊಂದಿಗೆ ಈ ತರಗತಿಗಳು ಫೆಬ್ರವರಿ 2001 ರಿಂದ ಪ್ರಾರಂಭವಾಗುತ್ತವೆ. ಕೋರ್ಸ್ಗೆ ಸಂಬಂಧಿಸಿದ ವಸ್ತುಗಳನ್ನು ಮಣಿಪಾಲ್ ಅಕಾಡೆಮಿ ಪೂರೈಸುವುದು.
ಮಾಹಿತಿ ತಂತ್ರಜ್ಞಾನದಲ್ಲಿ ಡಿಪ್ಲೊಮ, ಟೆಲಿ ಕಮ್ಯುನಿಕೇಷನ್ ತಂತ್ರಜ್ಞಾನದಲ್ಲಿ ಪಿಜಿ ಡಿಪ್ಲೊಮ, ಮಾಹಿತಿ ತಂತ್ರಜ್ಞಾನದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣಗಳು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಕಲಿಯಲಿಕ್ಕೆ ಲಭ್ಯವಿವೆ ಎಂದು ಮುಕ್ತ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿಯಾಂದು ಕೋರ್ಸ್ 5 ಸೆಮಿಸ್ಟರ್ಗಳನ್ನು ಹೊಂದಿದ್ದು, ಪ್ರತಿ ಸೆಮಿಸ್ಟರ್ಗೆ 6 ಸಾವಿರ ರುಪಾಯಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಶ್ವ ವಿದ್ಯಾಲಯದ ಎಲ್ಲಾ ಕೋರ್ಸ್ಗಳನ್ನು ಇಂಟರ್ನೆಟ್ ಜಾಲದಲ್ಲಿ ತರಲು ವಿವಿ ಯೋಚಿಸಿದೆ. ಕಂಪ್ಯೂಟರ್ ಹಾಗೂ ಐಟಿ ಶಿಕ್ಷಣ ಕುರಿತ ಹೊಸ ಕೋರ್ಸ್ಗಳ ಹೆಚ್ಚಿನ ವಿವರಗಳಿಗಾಗಿ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications