ಸಂತೇ ಮರಹಳ್ಳಿ ಸಕ್ಕರೆ ಕಾರ್ಖಾನೆ ಕ್ಲೋಸ್ ?
ಸಂತೇ ಮರಹಳ್ಳಿ : ಕುಂತೂರಿನ ಮಹದೇಶ್ವರ ಸಕ್ಕರೆ ಕಾರ್ಖಾನೆಯನ್ನು ಚೆನ್ನೈ ಷುಗರ್ಸ್ಗೆ ಮಾರಾಟ ಮಾಡುವ ಬಗ್ಗೆ ಮಾತುಕತೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾರ್ಖಾನೆಯ ಭವಿಷ್ಯ ನಿರ್ಧಾರವಾಗಲಿದೆ.
ರೈತರಿಂದ ಕಬ್ಬು ಖರೀದಿಯನ್ನು ಈಗಾಗಲೇ ನಿಲ್ಲಿಸಿದ್ದು, ಕಬ್ಬು ಅರೆಯುವುದನ್ನು ನಿಲ್ಲಿಸಲಾಗಿದೆ. ಕಬ್ಬು ಅರೆಯುವುದನ್ನು ನಿಲ್ಲಿಸಿರುವುದರ ಹಿಂದಿನ ಕಾರಣಗಳನ್ನು ಸ್ಪಷ್ಟವಾಗಿ ಕಾರ್ಖಾನೆಯ ಆಡಳಿತ ಮಂಡಳಿ ಹೇಳಿಲ್ಲ . ಸಕ್ಕರೆ ಕಾರ್ಖಾನೆ ಕಬ್ಬು ಅರೆಯುವುದನ್ನು ನಿಲ್ಲಿಸಿರುವುದರಿಂದ ಕಬ್ಬು ಬೆಳೆಗಾರರು ಅವಧಿ ಮೀರಿ ಬೆಳೆಯುತ್ತಿರುವ ಕಬ್ಬಿನ ಬೆಳೆಯ ವಿಲೇವಾರಿಗೆ ದಾರಿ ತೋಚದೆ ತಲೆಯ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ರೈತರ ಮುಂದಿರುವ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ಸಂತೇ ಮರಹಳ್ಳಿ ಹೋಬಳಿಯ ಕಬ್ಬು ಬೆಳೆಗಾರರ ಹೋರಾಟ ಸಮಿತಿಯ ಅಧ್ಯಕ್ಷ ಕೆ. ಎಂ. ರಾಜೇಂದ್ರ ಸ್ವಾಮಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications