ಬೆಂಗಳೂರಲ್ಲಿ ಮಂಜಿನ ಹನಿಯಂತೆ ಬಿತ್ತು ಮಳೆ
ಬೆಂಗಳೂರು : ಇಳೆಗೆ ತಂಪೆರೆವ ಮಳೆರಾಯನ ಕಾಯಕ ರಾಜ್ಯದ ಕೆಲವೆಡೆ ಮತ್ತೆ ಮುಂದುವರಿದಿದೆ. ಬೆಂಗಳೂರಿನ ಕೆಲವು ಬಡಾವಣೆಗಳಲ್ಲಂತೂ ಬುಧವಾರ ಬಿಟ್ಟು ಬಿಟ್ಟು ಹಗುರ ಮಳೆ ಸುರಿಯಿತು. ಒಂದೆರಡು ಕಡೆ ಜೋರು ಮಳೆಯೇ ಸುರಿದು ಐದೇ ನಿಮಿಷಯದಲ್ಲಿ ತಣ್ಣಗಾಯಿತು.
ಮೊದಲೇ ಕಾದಿದ್ದ ಟಾರು ರಸ್ತೆಗಳು ಕ್ಷಣದಲ್ಲಿ ನೀರು ಹೀರಿಕೊಂಡ ಕಾರಣ ಮಳೆ ಬಿದ್ದ ಸುಳಿವೂ ಸಿಗದಾಗಿತ್ತು. ಆದರೆ, ಆಗಸದಲ್ಲಿ ಸಂಜೆ ಸುಂದರ ಕಾಮನಬಿಲ್ಲು ಮೂಡಿತ್ತು. ಗುರುವಾರ ಬೆಳಗ್ಗಿನಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದಿದೆ. ಮಂಜಿನ ಹನಿ ಬಿದ್ದಂತೆ ನಾಲ್ಕಾರು ಹನಿಯ ಸಿಂಚನವಾಗಿದೆ. ಆದರೆ, ಯಳಂದೂರು, ಮುಳಬಾಗಲು, ಕೆ.ಜಿ.ಎಫ್‌ಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಉಳಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲವು ಕಡೆ ಕನಿಷ್ಠ ತಾಪಮಾನದಲ್ಲಿ ಏರಿಕೆಯೂ ಕಂಡು ಬಂದಿದೆ. ರಾಜ್ಯದ ಕಡಿಮೆ ತಾಪಮಾನ ಶಿವಮೊಗ್ಗದಲ್ಲಿ 16.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಅಥವಾ ಗುಡುಗಿನಿಂದ ಕೂಡಿದ ತುಂತುರು ಮಳೆ ಬೀಳುವ ಸಂಭವ ಇದೆ. ಉಳಿದಂತೆ ಒಣಹವೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇದ್ದು, ಒಂದೆರಡು ಬಾರಿ ಹಗುರವಾಗಿ ಮಳೆ ನಿರೀಕ್ಷಿತ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications