ನನಗೇನೂ ಗೊತ್ತಿಲ್ಲ , ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ - ಅಜರುದ್ದೀನ್
ನವದೆಹಲಿ : ಮ್ಯಾಚ್ಫಿಕ್ಸಿಂಗ್ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ಹೊರಿಸಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದವು ಎಂದು ಮಾಜಿ ಕ್ರಿಕೆಟ್ ಆಟಗಾರ ಅಜರುದ್ದೀನ್ ಶುಕ್ರವಾರ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ನಾನು ಯಾವತ್ತೂ ಮೋಸದಾಟದ ಬಗ್ಗೆ ಯೋಚಿಸಿಲ್ಲ . ಎಲ್ಲವೂ ನನ್ನ ವಿರುದ್ಧವಾಗಿದೆ ಎಂದು ಅಜರುದ್ದೀನ್ ಹೇಳಿದ್ದಾರೆ. ಸಿಬಿಐ ಮುಂದೆ ತಾವು ತಪ್ಪೊಪ್ಪಿಕೊಂಡಿರುವುದನ್ನು ನಿರಾಕರಿಸಿದ ಅವರು, ಪ್ರಶ್ನೆಯನ್ನು ಕೇಳಿದವರೇ ಉತ್ತರವನ್ನೂ ಹೇಳಿಕೊಂಡಿದ್ದಾರೆ ಎಂದರು.
ಭೂಗತ ಜಗತ್ತಿನೊಂದಿಗೆ ತಮಗಿರುವ ಸಂಬಂಧಗಳ ಬಗ್ಗೆ ಎದ್ದಿರುವ ಸುದ್ದಿಗಳ ಬಗ್ಗೆ ನನಗೆ ಏನೂ ಗೊತ್ತಿಲ್ಲ . ಮಾಫಿಯಾ ವ್ಯಕ್ತಿಗಳೊಂದಿಗೆ ತಾವಿರುವ ಫೋಟೋ ಬಗ್ಗೆಯೂ ಗೊತ್ತಿಲ್ಲ . ಆ ವ್ಯಕ್ತಿ ಯಾರೆಂಬುದಾಗಲೀ, ಫೋಟೋ ತೆಗೆದವರು ಯಾರೆನ್ನುವುದಾಗಲೀ ಗೊತ್ತಿಲ್ಲ ಎಂದು ಅವರು ಹೇಳಿದರು.
ಬುಕ್ಕಿ ಎಂ.ಕೆ. ಗುಪ್ತಾ ಅವರು ನಿಮಗೆ ಪರಿಚಯವಿದ್ದಾರೆಯೇ ಎನ್ನುವ ಪ್ರಶ್ನೆಗೂ ಅಜರ್ ಸ್ಪಷ್ಟವಾಗಿ ಉತ್ತರಿಸಲಿಲ್ಲ . ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದರು. ಬುಕ್ಕಿ ಗುಪ್ತಾ ಅವರನ್ನು ನನಗೆ ಪರಿಚಯಿಸಿದ್ದೇ ಅಜರುದ್ದೀನ್ ಎಂದು ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಹ್ಯಾನ್ಸಿ ಕ್ರೊನಿಯೆ ಆಪಾದಿಸಿದ್ದುದನ್ನು ಇಲ್ಲಿ ಸ್ಮರಿಸಬಹುದು.
(ರಾಯ್ಟರ್ಸ್)
ವಾರ್ತಾ ಸಂಚಯ
ಮುಖಪುಟ / ಆಟದ ಅಂಗಳ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications