ಮಹಾರಾಷ್ಟ್ರ, ಕರ್ನಾಟಕ ಗಡಿವಿವಾದಕ್ಕೆ ಮಾತುಕತೆಯಿಂದ ಪರಿಹಾರ
ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ಸಮಸ್ಯೆಯನ್ನು ಪರಸ್ಪರ ಮಾತುಕತೆ, ಚರ್ಚೆ ಮೂಲಕ ಬಗೆಹರಿಸಿಕೊಳ್ಳಬಹುದೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ನಗರದಲ್ಲಿ ಏರ್ಪಡಿಸಲಾಗಿದ್ದ ಸಹಕಾರಿಗಳ ಸಮಾವೇಶ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೇಶ್ಮುಖ್, ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಪ್ರಧಾನಿ ಅವರೂ ಕೂಡಾ ಸಂಸತ್ನ ಚಳಿಗಾಲದ ಅಧಿವೇಶನದ ನಂತರ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವ ಸಾಧ್ಯತೆ ಇದೆ. ಈ ಸಂಬಂಧ ಪ್ರಧಾನಿ ಅವರಿಗೆ ಪತ್ರ ಬರೆಯಲಾಗಿದೆ. ಗಡಿ ವಿವಾದ ಇತ್ಯರ್ಥಕ್ಕಾಗಿ ಮಹಾರಾಷ್ಟ್ರದಲ್ಲಿ ಉನ್ನತ ಮಟ್ಟದ ಸಮಿತಿಯಾಂದನ್ನು ರಚಿಸಲಾಗಿದೆ. ಗಡಿ ವಿವಾದ ತೀರಾ ಹಳೆಯ ವಿಷಯವಾಗಿರುವುದರಿಂದ ಇತ್ಯರ್ಥಕ್ಕೆ ಕಾಲಮಿತಿ ನಿಗದಿ ಸಾಧ್ಯವಿಲ್ಲ. ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿರುವ ಈ ವಿವಾದವನ್ನು ಸಂಧಾನ ಮಾತುಕತೆ ಮೂಲಕವೇ ಪರಿಹರಿಸಿಕೊಳ್ಳಲು ಯತ್ನಿಸಲಾಗುವುದೆಂದು ದೇಶ್ಮುಖ್ ಹೇಳಿದರು.
ದೇಶಮುಖ್ ಅವರ ್ಫಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಶತಮಾನಗಳ ಗಡಿ ವಿವಾದ ಬಗೆಹರಿಯಲು ನಡೆಯುವ ಯತ್ನಗಳಿಗೆ ಎಲ್ಲ ಕಡೆಯಿಂದ ಸಹಾಕರ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications