ವೀರಪ್ಪನ್ ಬಂಧನಕ್ಕೆ : ಅಡ್ವಾಣಿ ಜೊತೆ ಕೃಷ್ಣ ಸಮಾಲೋಚನೆ
ನವದೆಹಲಿ : ವೀರಪ್ಪನ್ ಬಂಧನಕ್ಕೆ ತೀವ್ರ ಕಾರ್ಯಾಚರಣೆ ಆರಂಭಿಸಿರುವ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳಿಗೆ ಅಗತ್ಯ ಬಿದ್ದರೆ ಕಮಾಂಡೋ ಪಡೆಯ ನೆರವು ನೀಡವ ಭರವಸೆಯನ್ನು ಗೃಹ ಸಚಿವ ಎಲ್.ಕೆ. ಆಡ್ವಾಣಿ ನೀಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಕೇಂದ್ರದ ನೆರವು ಪಡೆಯುವ ಸಂಬಂಧ ಸೋಮವಾರ ಕೇಂದ್ರ ಗೃಹಮಂತ್ರಿ ಎಲ್. ಕೆ. ಆಡ್ವಾಣಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ದೊರೆತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಆದರೆ, ಸಂಸದೀಯ ಭವನದಲ್ಲಿ 30 ನಿಮಿಷ ಕಾಲ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ ಅವರು, ಯಾವ ರೀತಿಯ ನೆರವು ಕೋರಲಾಗಿದೆ ಎಂಬುದನ್ನು ವಿವರಿಸಲು ನಿರಾಕರಿಸಿದರು. ವೀರಪ್ಪನ್ ಬಂಧನಕ್ಕೆ ಎರಡೂ ರಾಜ್ಯ ಸರಕಾರಗಳು ನಡೆಸುತ್ತಿರುವ ಯತ್ನಕ್ಕೆ ಕೇಂದ್ರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ದೊರೆತಿರುವುದಾಗಿ ತಿಳಿಸಿದರು.
ಪ್ರಧಾನಿ ಭೇಟಿ : ಎರಡೂ ಸರಕಾರಗಳ ವಿಶೇಷ ಕಾರ್ಯಾಚರಣೆ ಪಡೆಗಳು ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ವೀರಪ್ಪನ್ ವಿಷಯದಲ್ಲಿ ರಾಜ್ಯ ಸರಕಾರದ ನಿಲುವಿಗೆ ತಮಿಳುನಾಡೂ ಕೂಡಾ ಪೂರಕವಾಗಿ ಸ್ಪಂಧಿಸುತ್ತಿದೆ ಎಂದು ಕೃಷ್ಣ ತಿಳಿಸಿದರು. ಈ ಸಂಬಂಧ ಸೋಮವಾರ ಸಂಜೆ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಲಿದ್ದು, ಕಮಾಂಡೋ ಪಡೆ ಕಳಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ ವಾರದಿಂದ ಕರ್ನಾಟಕ ಮತ್ತು ತಮಿಳುನಾಡಿನ ಉನ್ನತ ಅಧಿಕಾರಿಗಳ ತಂಡ ಗೃಹಸಚಿವ ಅಡ್ವಾಣಿ ಮತ್ತು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್ ಅವರನ್ನು ಭೇಟಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
(ಪಿಟಿಐ)
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications