ಮೈಸೂರಿನಲ್ಲಿ ಡಿ. 1ರಂದು ಚಾವುಂಡರಾಯ ಪ್ರಶಸ್ತಿ ಪ್ರದಾನ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಅತ್ಯುನ್ನತ ಪುರಸ್ಕಾರವಾದ ಚಾವುಂಡರಾಯ ಪ್ರಶಸ್ತಿಯನ್ನು ಡಿಸೆಂಬರ್ 1ರಂದು ಮೈಸೂರಿನಲ್ಲಿ ನ್ಯಾಯತೀರ್ಥ ಎಂ.ಸಿ. ಪದ್ಮನಾಭ ಶರ್ಮರಿಗೆ ಪ್ರದಾನ ಮಾಡಲಾಗುವುದು. 1999-2000 ಸಾಲಿನ ಈ ಪ್ರಶಸ್ತಿಗೆ ಜಿನವಾಣಿ ಮಾಸಪತ್ರಿಕೆಯ ಮೂಲಕ ಸಾಹಿತ್ಯ ಸೇವೆ ಮಾಡುತ್ತಿರುವ ಪದ್ಮನಾಭ ಶರ್ಮರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.
ಡಿಸೆಂಬರ್ ಒಂದರ ಶುಕ್ರವಾರ ಸಂಜೆ 6 ಗಂಟೆಗೆ ಜಾನ್ಸಿರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ ಸಂಸ್ಥೆಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು, ಶರ್ಮರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ಕೆ. ಅನಂತರಾಮು ಅವರು ಅಭಿನಂದನಾ ಭಾಷಣ ಮಾಡಲಿದ್ದು, ಸಾಹಿತ್ಯ ಪರಿಷತ್ತಿನ ಅಧಕ್ಷ ಬಸವಾರಾಧ್ಯರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಚಂದ್ರಣ್ಣಗೌಡರು ತಿಳಿಸಿದ್ದಾರೆ.
ಶರ್ಮರ ಬಗ್ಗೆ : ಕಾಶಿಯಲ್ಲಿ ವಿದ್ಯಾಭ್ಯಾಸ ಮಾಡಿದ ಎಂ. ಸಿ. ಪದ್ಮನಾಭ ಶರ್ಮರು ನ್ಯಾಯತೀರ್ಥ ಪದವಿ ಪಡೆದವರು. ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾ ಕೇಂದ್ರದಲ್ಲಿ ಸಂಶೋಧನಾ ಸಹಾಯಕರಾಗಿ ನಿವೃತ್ತರಾದ ತರುವಾಯ 1951ರಲ್ಲಿ ಜಿನವಾಣಿ ಪತ್ರಿಕೆ ಆರಂಭಿಸಿ ಹಲವಾರು ಕೃತಿಗಳನ್ನು ರಚಿಸಿದರು.
ಸನ್ಮತಿ ಗ್ರಂಥ ಮಾಲೆ ಎಂಬ ಪ್ರಕಾಶನ ಸಂಸ್ಥೆ ಮೂಲಕ ಯೋಗಾಮೃತ ಶತಕ, ಯಶೋದರ ಕಾವ್ಯ, ಕಾಲಜ್ಞಾನ ಪ್ರಕಾಶಕ, ಅಭಿನವ ವಾಗ್ದೇವಿ ಕಂತಿ, ಧರ್ಮನಾಥ ಪುರಾಣಂ, ಅಜಿತ ತೀರ್ಥಂಕರ ಪುರಾಣಂ, ಪುರಾಣ ತಿಲಕಂ, ಚಾವುಂಡರಾಯ ಪುರಾಣಂ, ಅಂಜನಾ ಪವನಂಜಯ ಪದಾರ್ಥ ಸಾರ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.
ರತ್ನನಂದಿ ವಿರಚಿತ ಪತ್ರಬಾಹು ಚರಿತಂ ಮುಂತಾದ ಗ್ರಂಥಗಳನ್ನೂ ಸಂಪಾದಿಸಿದ್ದಾರೆ. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿರುವ ಅವರಿಗೆ ಎರಡೂ ಕಣ್ಣುಗಳ ದೃಷ್ಟಿ ಮಂಕಾಗಿರುವ ಕಾರಣ, ಅವರ ಊರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಲು ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications