ಸೊಗಡಿನ ಅವರೆ ಪೇಟೆಗೆ ಬಂದಿದೆ
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ನಿಂತಿದೆ. ಗುಡುಗಿನ ಸದ್ದೂ ಇಲ್ಲ. ಆದರೆ, ಮುಂದುವರಿದ ಒಣಹವೆಯ ನಡುವೆಯೂ ಚಳಿಯ ಅನುಭವ ಎಲ್ಲರಿಗೂ ಆಗುತ್ತಿದೆ.
ಫ್ಯಾನ್, ಎ.ಸಿ.ಗಳ ಬೆಲೆ ಇಳಿದು, ಉಣ್ಣೆ ವಸ್ತ್ರಗಳಿಗೆ ಬೇಡಿಕೆ ಬಂದಿದೆ. ಪೆಟ್ಟಿಗೆ ಸೇರಿದ್ದ ರಂಗು ರಂಗಿನ ಸ್ವೆಟರ್‌ಗಳು ಮೈಬೆಚ್ಚಗೆ ಮಾಡಿವೆ. ಬೆಳಗಿನ ಚಳಿ, ಸುರಿದ ಮಂಜು ಸೂರ್ಯ ರಶ್ಮಿಯ ಶಾಖ ಏರಿದಂತೆಲ್ಲ ಪ್ರಕೃತಿ ಸಹಜವಾಗಿ ಕರಗುತ್ತಿವೆ. ಸೊಗಡಿನ ಅವರೆ ಕಾಯಿ ಪೇಟೆಗೆ ಬಂದಿದೆ.
ಹೇಳಿ ಕೇಳಿ ಅವರೆಯ ಕಾಲವಲ್ಲವೇ ಇದು. ಸಂಕ್ರಾಂತಿಯವರೆಗೂ ಇನ್ನು ಅವರೆ ಕಾಯಿಯದೇ ಸುಗ್ಗಿ. ಅವರೇ ಕಾಳು ರೊಟ್ಟಿ, ಉಪ್ಪಿಟ್ಟು, ಸಾರು ನೆನೆಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಈ ಮಧ್ಯೆ ಬೆಲೆಯೂ ಆಶಾದಾಯಕವಾಗೇ ಇದೆ. ಹಿರಿಯರ ಪ್ರಕಾರ ಇಬ್ಬನಿ ಬೀಳುತ್ತಿದ್ದರೂ, ಅವರೆಯ ಸೊಗಡು ಕೊಂಚ ಕಡಿಮೆ ಆಗಿದೆಯಂತೆ.
ಅಂದಹಾಗೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸ್ವಲ್ಪ ಬದಲಾವಣೆಯೂ ಕಂಡುಬಂದಿದೆ. ರಾಜ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ 13.1 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ನಾಡಿದ್ದು ಬೆಳಗಿನ ವರೆಗಿನ ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications