ದಲಿತರ ಮೇಲಿನ ದೌರ್ಜನ್ಯ : ಕೊಳೆಯುತ್ತಿರುವ 2000 ಪ್ರಕರಣಗಳು
ಬೆಂಗಳೂರು : ದಲಿತರ ವಿರುದ್ಧ ನಡೆದ ದೌರ್ಜನ್ಯಗಳ ವಿಚಾರಣೆ ವಿಳಂಬವಾಗುತ್ತಿದ್ದು , ಬಾಕಿ ಇರುವ ಸುಮಾರು 2000 ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ಕಾರ ಹೈಕೋರ್ಟನ್ನು ಕೋರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ದಲಿತರು ಮತ್ತು ಸವರ್ಣೀಯರ ನಡುವೆ ಈಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಂಘರ್ಷಗಳ ಕುರಿತು ಆತಂಕ ವ್ಯಕ್ತಪಡಿಸಿದರು. ಡಿಸೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಸೇರುವ ದೌರ್ಜನ್ಯ ವಿರೋಧಿ ಸಮಿತಿಯು ವಿಶೇಷ ಕೋರ್ಟ್ ಸ್ಥಾಪಿಸುವಂತೆ ಹೈಕೋರ್ಟನ್ನು ಕೋರುವ ನಿರ್ಣಯವನ್ನು ಕೈಗೊಳ್ಳಲಿದೆ ಎಂದರು.
ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ಆದ್ಯತೆ ಮೇಲೆ ವಿಚಾರಣೆ ನಡೆಸಲು ಮೈಸೂರು, ಕೋಲಾರ, ಬೆಂಗಳೂರು, ಚಿತ್ರದುರ್ಗ, ಗುಲ್ಬರ್ಗಾ ಹಾಗೂ ದಾವಣಗೆರೆಗಳಲ್ಲಿ ನಿಯೋಜಿತ ನ್ಯಾಯಾಲಯಗಳನ್ನು ರಚಿಸಲಾಗಿದ್ದರೂ, ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿದೆ ಎಂದು ಸಚಿವರು ಹೇಳಿದರು. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಂಚಾರಿ ನ್ಯಾಯಲಯವನ್ನು ಸ್ಥಾಪಿಸಲು ಹೈಕೋರ್ಟಿಗೆ ಮನವಿ ಮಾಡಿದ್ದರೂ, ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications