ದತ್ತಪೀಠ : ಹಿಂದೂ- ಮುಸ್ಲಿಂ ಪದ್ಧತಿಯಲ್ಲಿ ಪೂಜೆಗೆ ನಿರ್ವಹಣಾ ಸಮಿತಿ
ಬಾಬಾ ಬುಡನಗಿರಿ : ಇಲ್ಲಿನ ದತ್ತ ಪೀಠದ ದೈನಂದಿನ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಲು ನಿರ್ವಹಣಾ ಸಮಿತಿಯಾಂದನ್ನು ರಚಿಸಲು ಸೋಮವಾರ ನಡೆದ ಶಾಂತಿಸಭೆ ನಿರ್ಧರಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ. ಬಿ. ಚಂದ್ರೇ ಗೌಡ ಮತ್ತು ಸಾರಿಗೆ ಸಚಿವ ಸಿ.ಆರ್. ಸಗೀರ್ ಆಹ್ಮದ್ ಅವರ ಉಪಸ್ಥಿತಿಯಲ್ಲಿ ದತ್ತ ಪೀಠದ ಬಳಿ ನಡೆದ ಶಾಂತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯು, ದತ್ತ ಪೀಠದಲ್ಲಿ ಪ್ರತಿದಿನ ಎರಡೂ ಸಂಪ್ರದಾಯಗಳಿಗೆ ಅನುಗುಣವಾಗಿ ಪೂಜೆ ಸಲ್ಲಿಕೆ, ಆಡಳಿತ ನಿರ್ವಹಣೆ, ದತ್ತ ಜಯಂತಿ, ಉರುಸ್ ಮುಂತಾದ ಚಟುವಟಿಕೆಗಳನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತುಕೊಂಡಿದೆ.
ಪ್ರತಿವರ್ಷ ದತ್ತ ಪೀಠದಲ್ಲಿ ನಡೆಯಬೇಕಾಗಿರುವ ಕಾರ್ಯಕ್ರಮಗಳನ್ನು ಸಮಿತಿಯೇ ನೋಡಿಕೊಳ್ಳಲಿದ್ದು, ಸಮಿತಿಗೆ ಶಾಸನ , ಕಾನೂನು ಬದ್ಧ ಮನ್ನಣೆ ನೀಡಲು ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು. ಸಮಿತಿ ತೆಗೆದುಕೊಂಡಿರುವ ನಿರ್ಧಾರಗಳಿಗೆ ಅದು ಬದ್ಧವಾಗಿರದಿದ್ದಲ್ಲಿ ಸರಕಾರ ತನ್ನ ಕೆಲಸವನ್ನು ಮಾಡುವಲ್ಲಿ ಹಿಂದೆ ಬೀಳುವುದಿಲ್ಲ ಎಂದು ಸಭೆಯಲ್ಲಿದ್ದ ಸಚಿವರು ಹೇಳಿದರು. ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಚ್. ಗೋಪಾಲ ಕೃಷ್ಣೇ ಗೌಡ, ಪೊಲೀಸ್ ಮುಖ್ಯಾಧಿಕಾರಿ ಡಾ. ರಾಮಚಂದ್ರ ರಾವ್ ಉಪಸ್ಥಿತರಿದ್ದರು.
(ಇನ್ಫೋವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications