ಮ್ಯಾಚ್ಫಿಕ್ಸಿಂಗ್ : ಅಜರ್ ಆರೋಪದ ಮೇಲೆ ಮಾಧವನ್ ಮೊಹರು
ನವ ದೆಹಲಿ : ಮ್ಯಾಚ್ಫಿಕ್ಸಿಂಗ್ನಲ್ಲಿ ಮಾಜಿ ಕ್ರಿಕೆಟ್ ತಾರೆ ಅಜರುದ್ದೀನ್ ಅವರು ಪಾಲ್ಗೊಂಡಿದ್ದಾರೆ ಹಾಗೂ ಸಿಬಿಐ ಆರೋಪ ಹೊರಿಸಿರುವ ಉಳಿದ ಆಟಗಾರರೂ ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿರುವುದು ಬಿಸಿಸಿಐನ ವಿಶೇಷ ಆಯುಕ್ತ ಮಾಧವನ್ ಅವರ ತನಿಖೆಯಿಂದ ದೃಢಪಟ್ಟಿದೆ ಎಂದು ಬಿಸಿಸಿಐ ಅಧ್ಯಕ್ಷ ಮುತ್ತಯ್ಯ ಹೇಳಿದ್ದಾರೆ.
ಮಾಧವನ್ ವರದಿ ನೋಡಿದ ನಂತರ ನನಗೆ ಆಘಾತವಾಗಿದೆ. ಈ ಮೊದಲು ನಮ್ಮ ಆಟಗಾರರು ಇಂಥಾ ಪ್ರಕರಣದಲ್ಲಿ ಭಾಗವಹಿಸಿದ್ದಾರೆ ಎನ್ನುವುದನ್ನು ನಂಬುವುದೂ ಸಾಧ್ಯವಿರಲಿಲ್ಲ ಎಂದು ಮುತ್ತಯ್ಯ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ಇದಕ್ಕೆ ಮೊದಲು ಮಾಧವನ್ ವರದಿ ಬಗೆಗೆ ಅವರು ಕೇಂದ್ರ ಕ್ರೀಡಾ ಸಚಿವ ಉಮಾಭಾರತಿ ಅವರೊಂದಿಗೆ ಚರ್ಚೆ ನಡೆಸಿದರು.
ಮ್ಯಾಚ್ಫಿಕ್ಸಿಂಗ್ನಲ್ಲಿ ಅಜರುದ್ದೀನ್ ಅವರ ಪಾತ್ರವೇ ಪ್ರಮುಖವಾಗಿದೆ. ತಪ್ಪಿತಸ್ಥ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಶಿಸ್ತು ಸಮಿತಿ ತೀರ್ಮಾನ ಕೈಗೊಳ್ಳುವುದು ಎಂದರು. ಇಂಥಾ ಘಟನೆಗಳು ಮುಂದೆಂದೂ ನಡೆಯದಂತೆ ಕ್ರಮ ಕೈಗೊಳ್ಳುವಂತೆ ತಮಗೆ ಕ್ರೀಡಾ ಸಚಿವರು ತಿಳಿಸಿದ್ದಾರೆ ಎಂದು ಮುತ್ತಯ್ಯ ಹೇಳಿದರು. ಈ ನಡುವೆ ಮ್ಯಾಚ್ಫಿಕ್ಸಿಂಗ್ನ ಪ್ರಮುಖ ಆರೋಪಿ ಅಜರುದ್ದೀನ್ ಅವರಿಗೆ ಕ್ರಿಕೆಟ್ನಿಂದ ಅಜೀವ ಬಹಿಷ್ಕಾರ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಉಳಿದ ಆಟಗಾರರಿಗೆ ಕಡಿಮೆ ಪ್ರಮಾಣದ ಶಿಕ್ಷೆ ನೀಡಲಾಗುವುದು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಆಟದ ಅಂಗಳ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications