ಸರ್ವಜ್ಞ ಪ್ರತಿಮೆಯನ್ನು ಮರೀನಾ ಬೀಚ್‌ನಲ್ಲೇ ಸ್ಥಾಪಿಸಲಿ- ರಾಣಿ ಸತೀಶ್
ಧಾರವಾಡ : ಸರ್ವಜ್ಞರ ಪ್ರತಿಮೆಯನ್ನು ಚೆನ್ನೈನ ಕಾರ್ಪೊರೇಷನ್ ಪಾರ್ಕ್‌ನ ಬದಲಿಗೆ ಮರೀನಾ ಕಡಲ ತಡಿಯಲ್ಲಿ ಸ್ಥಾಪಿಸುವಂತೆ ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ಸದ್ಯದಲ್ಲೇ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಮಂಗಳವಾರ ತಿಳಿಸಿದ್ದಾರೆ.
ತಮಿಳು ನಾಡಿನ ಸಂತ- ಸಾಹಿತಿ ತಿರುವಳ್ಳುವರ್ ಪ್ರತಿಮೆಯನ್ನು ಈಗಾಗಲೇ ಬೆಂಗಳೂರು ನಗರದಲ್ಲಿ ಸ್ಥಾಪಿಸಲಾಗಿದ್ದು, ಬಟ್ಟೆಯಿಂದ ಮುಚ್ಚಲಾಗಿದೆ. ಅದೇ ಸ್ಥಳದಲ್ಲಿ ಪ್ರತಿಮೆಯನ್ನು ್ನ ಅನಾವರಣಗೊಳಿಸಲಾಗುವುದು ಎಂದು ಸುದ್ದಿಗಾರರಿಗೆ ಅವರು ಹೇಳಿದರು.
ಶ್ರೀಶೈಲದಲ್ಲಿ ಅಕ್ಕ ಮಹಾದೇವಿ ಪ್ರತಿಮೆ ? : ಕರ್ನಾಟಕದಿಂದ ಶ್ರೀಶೈಲಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಜೊತೆ ಚರ್ಚಿಸಿದ್ದೇವೆ. ತನ್ನ ಜೀವನದ ಕೊನೆಯನ್ನು ಶ್ರೀಶೈಲದಲ್ಲೇ ಕಂಡಿದ್ದಾರೆ ಎನ್ನಲಾಗಿರುವ ವಚನಗಾರ್ತಿ ಅಕ್ಕ ಮಹಾದೇವಿ ಅವರ ಪ್ರತಿಮೆಯನ್ನು ಅಲ್ಲಿ ಸ್ಥಾಪಿಸುವಂತೆ ಚರ್ಚೆಯ ವೇಳೆ ನಾಯ್ಡು ಅವರಿಗೆ ಮನವಿ ಮಾಡಿದ್ದೇವೆ ಎಂದರು.
ಹೊಸ ಸಂಸ್ಕೃತಿ ನೀತಿ : ಕರ್ನಾಟಕದ ಅಕಾಡೆಮಿಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಸದ್ಯದಲ್ಲೇ ಹೊಸ ನೀತಿಯನ್ನು ಜಾರಿಗೆ ತರಲಾಗುವುದು. ಈ ನೀತಿಯಿಂದ ಪ್ರಸ್ತುತ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಾಣದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ವತೋಮುಖ ಪ್ರಗತಿ ಸಾಧ್ಯವಾಗಲಿದೆ. 38 ಸಂಪುಟಗಳ ‘ದಾಸ ಸಾಹಿತ್ಯ’ವು ಮುದ್ರಣದ ಹಂತದಲ್ಲಿದ್ದು, ಜನವರಿ 15ರ ಹೊತ್ತಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೇಳಿದರು.
(ಯುಎನ್‌ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications