ಮಂಗಳೂರು : ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎರಡು ಫ್ಲೈ ಓವರ್
ಮಂಗಳೂರು : ನಗರದಲ್ಲಿ ಅತೀ ಹೆಚ್ಚು ಟ್ರಾಫಿಕ್ ಇರುವ ಹಂಪನ ಕಟ್ಟೆ ಮತ್ತು ಜ್ಯೋತಿ ಸರ್ಕಲ್ ಬಳಿ ಎರಡು ಫ್ಲೈ ಓವರ್ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ತೇಜೋಮಯ ಹೇಳಿದ್ದಾರೆ.
ಫ್ಲೈ ಓವರ್ಗಳ ನಿರ್ಮಾಣಕ್ಕೆ ಸುಮಾರು 20.4 ಕೋಟಿ ರೂಪಾಯಿ ಯೋಜನೆಯನ್ನು ರೂಪಿಸಲಾಗಿದ್ದು, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಆರ್ಥಿಕ ಸಹಾಯ ಕೋರಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ನವೆಂಬರ್ 30ರಂದು ಫ್ಲೈ ಓವರ್ ಬಗ್ಗೆ ಪರಿಶೀಲನೆ ನಡೆಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ನಿರ್ದೇಶಕರು ನಗರಕ್ಕಾಗಮಿಸಲಿದ್ದಾರೆ ಎಂದು ತೇಜೋಮಯ ಪತ್ರಿಕಾ ಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಹಂಪನ ಕಟ್ಟೆ ಮತ್ತು ಜ್ಯೋತಿ ಥಿಯೇಟರಿನ ಬಳಿ ಫ್ಲೈ ಓವರ್ ನಿರ್ಮಿಸುವ ಕುರಿತು ಚೆನ್ನೈಯ ಕಮ್ಸಸ್ ಸಂಸ್ಥೆ ಪರಿಶೀಲನೆ ನಡೆಸಿದೆ. ಹಂಪನ ಕಟ್ಟೆಯಲ್ಲಿರುವ ವಿಶ್ವ ವಿದ್ಯಾಲಯ ಕಾಲೇಜು ಬಳಿಯಿಂದ ಬಾವುಟ ಗುಡ್ಡದ ಎಂಸಿಸಿ ಬ್ಯಾಂಕ್ವರೆಗೆ ಮತ್ತು ಲೇಡಿ ಗೋಶನ್ ಆಸ್ಪತ್ರೆಯಿಂದ ಬಲ್ಮಠ ರಸ್ತೆಯ ಮಧ್ಯ ಭಾಗದ ವರೆಗೆ ಫ್ಲೈಓವರ್ ನಿರ್ಮಿಸಲಾಗುವುದು. ಉರ್ವ ಸ್ಟೋರ್ನಲ್ಲಿರುವ ಮೂಡ ಕಚೇರಿಯಿಂದ ಕೊಟ್ಟಾರವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುವುದು ಎಂದು ತೇಜೋಮಯ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications