ರಸ್ತೆ ಕಾಮಗಾರಿ ವೀಕ್ಷಣೆಗೆ ಇಬ್ಬರು ತಜ್ಞರ ಸಮಿತಿ ರಚನೆ ಪ್ರಸ್ತಾವ
ಬೆಂಗಳೂರು : ರಸ್ತೆ ಕಾಮಗಾರಿಗಳನ್ನು ಸ್ವತಂತ್ರವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಬ್ಬರು ತಜ್ಞರ ಸಮಿತಿಯನ್ನು ನೇಮಿಸಲು ಯೋಚಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಧರ್ಮಸಿಂಗ್ ಮಂಗಳವಾರ ಹೇಳಿದ್ದಾರೆ.
ಸಮಿತಿಯು ರಾಜ್ಯಾದ್ಯಂತ ಪ್ರವಾಸ ಮಾಡಿ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಲಿದ್ದು, ಅಧ್ಯಯನ ವರದಿಗಳನ್ನು ಸಲ್ಲಿಸಲಿದೆ. ರಸ್ತೆ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಸ್ಥಳೀಯ ಜನರ ಸಮಿತಿಯಾಂದನ್ನು ರಚಿಸಬೇಕೆಂಬ ಪ್ರಸ್ತಾವನೆ ಇದ್ದು, ಕಳಪೆ ಕಾಮಗಾರಿ ನಡೆಸುವವರನ್ನು ಶಿಕ್ಷಿಸಲು ಸರಕಾರ ಬದ್ದವಾಗಿದೆ ಎಂದು ಧರ್ಮಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ದುರಸ್ತಿಗೆ 145 ಕೋಟಿ ರುಪಾಯಿ : ಇತ್ತೀಚಿನ ಮಳೆಯಿಂದ ರಸ್ತೆಗಳು ತೀರಾ ಹದಗೆಟ್ಟಿವೆ ಎಂಬುದನ್ನು ಒಪ್ಪಿಕೊಂಡ ಧರ್ಮಸಿಂಗ್, ದುರಸ್ತಿ ಕೈಗೊಳ್ಳುವವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ದುರಸ್ತಿಗೆ 145 ಕೋಟಿ ರುಪಾಯಿಗಳು ಬೇಕಾಗಿದೆ. ಪರಿಹಾರ ನಿಧಿಯಿಂದ ಕೇವಲ 57 ಕೋಟಿ ರುಪಾಯಿ ಬಂದಿದೆ ಎಂದು ಹೇಳಿದ್ದಾರೆ.
ರಾಜ್ಯದ 2043 ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿ ಕೈಗೊಳ್ಳಲು ಹಣಕಾಸು ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿಕೊಂಡಿದೆ. 191 ಕಿಲೋಮೀಟರ್ ಉದ್ದದ ಬೀದರ್-ಹಟ್ಟಿಗೂಡು ರಸ್ತೆಯನ್ನು 250 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ . ಇದಕ್ಕಾಗಿ ಜಾಗತಿಕ ಮಟ್ಟದ ಟೆಂಡರ್ ಕರೆಯಲಾಗುವುದು. 196 ಕಿಲೋಮೀಟರ್ ಉದ್ದದ ಶ್ರೀರಂಗಪಟ್ಟಣ - ಕಿಬ್ಬವನಹಳ್ಳಿ - ಹಳಿಯಾಳ - ಹಿರಿಯೂರು ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಲಾಗುವುದೆಂದು ಸಚಿವರು ತಿಳಿಸಿದ್ದಾರೆ.
ವಿವಾದಿತ ಬೆಂಗಳೂರು - ಮೈಸೂರು ಕಾರಿಡಾರ್ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದ ತಕ್ಷಣ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಲಾಗುವುದುೆಂದು ಅವರು ಹೇಳಿದ್ದಾರೆ.
(ಯುಎನ್ಐ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications