ಬೆಟಗೇರಿಯಲ್ಲಿ ಆನಂದಕಂದರ ಶತಮಾನೋತ್ಸವ ಕಾರ್ಯಕ್ರಮ
ಬೆಟಗೇರಿ : ಕನ್ನಡ ಸಾರಸ್ವತ ಲೋಕದ ದಿಗ್ಗಜರಲ್ಲೊಬ್ಬರಾದ ಆನಂದಕಂದ ಎಂಬ ಕಾವ್ಯನಾಮದಿಂದ ಖ್ಯಾತರಾಗಿದ್ದ ಪತ್ರಕರ್ತ, ಸಾಹಿತಿ ಬೆಟಗೇರಿ ಕೃಷ್ಣಶರ್ಮರ ಸೇವೆಯನ್ನು ಗುರುತಿಸುವಲ್ಲಿ ಹಿಂದೆಬಿದ್ದ ಕನ್ನಡದ ಜನತೆಯಿಂದ ಶರ್ಮರಿಗೆ ಅಪಾರ ಅನ್ಯಾಯವಾಯಿತು ಎಂದು ಕನ್ನಡ ಕಾವಲು ಸಮಿತಿಯ ಮಾಜಿ ಅಧ್ಯಕ್ಷ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಬೆಟಗೇರಿಯಲ್ಲಿ ನಡೆದ ಕೃಷ್ಣಶರ್ಮರ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಕನ್ನಡ ಜನರೂ ಕೃಷ್ಣಶರ್ಮರನ್ನು ಗುರುತಿಸುವ ಕಾರ್ಯ ಮಾಡಲಿಲ್ಲ. ಈಗ ಸರಕಾರವೂ ಅವರನ್ನು ಉಪೇಕ್ಷಿಸಿದೆ. ಶತಮಾನೋತ್ಸವ ಸಂದರ್ಭದಲ್ಲಿಯಾದರೂ ಸರಕಾರ ಅವರನ್ನು ಸ್ಮರಿಸುವ ಮೂಲಕ ತನ್ನ ತಪ್ಪನ್ನು ತಿದ್ದಿಕೊಳ್ಳಬಹುದಿತ್ತು ಎಂದು ಅವರು ಹೇಳಿದರು. ರಾಷ್ಟ್ರಮಟ್ಟದಲ್ಲಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಶರ್ಮರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲಿಲ್ಲ ಎಂದು ವಿಷಾದಿಸಿದರು.
ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಮರ್ಶಕ ಡಾ. ಕೀರ್ತಿನಾಥ ಕುರ್ತುಕೋಟಿ ಅವರು ಮಾತನಾಡಿ ಗಡಿಭಾಗದಲ್ಲಿ ಕನ್ನಡದ ಸುಪ್ರಭಾತ ಮೊಳಗಿಸಿದ ಆನಂದಕಂದರ ಸರಳ ಜೀವನದ ವೈಶಿಷ್ಟ್ಯಗಳನ್ನು ವಿವರಿಸಿದರು. ಸಾವಳಗಿಯ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮಿಗಳು ಆಶೀರ್ವಚನ ನೀಡಿದರು. ಅಕ್ಕಿಸಾಗರದ ನಂಜನಗೂಡು ಶಿವಾಚಾರ್ಯ ಮಹಾಸ್ವಾಮಿಗಳು, ಚಂದ್ರಗಿರಿಯ ವೇದಮೂರ್ತಿ ಗಂಗಾಧರ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ದಸರಾ ಜಂಬೂಸವಾರಿಯನ್ನು ನೆನಪಿಸುವಂತೆ ಸಾಲಂಕೃತ ವಾಹನದಲ್ಲಿ ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಡೊಳ್ಳುಕುಣಿತ, ಕರಡಿ ಮಜಲು ಮುಂತಾದ ಜನಪದ ನೃತ್ಯಗಳು ಜನಾಕರ್ಷಣೆಯ ಕೇಂದ್ರಬಿಂದುವಾಗಿದ್ದವು. ಇದೇ ಸಂದರ್ಭದಲ್ಲಿ ಆನಂದಕಂದರ ಹೆಸರಿನಲ್ಲಿ ನಿರ್ಮಿಸಲಾಗಿರುವ ಸಮುದಾಯಭವನದ ಅನಾವರಣವೂ ನಡೆಯಿತು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications