ರಾಜ್ಯೋತ್ಸವ: ದೀಪ, ಮೈಕಿಗೆ ಬಾಡಿಗೆ ನೀಡದ ವಾಟಾಳ್ ವಿರುದ್ಧ ದೂರು
ಬೆಂಗಳೂರು : ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಧ್ವನಿವರ್ಧಕ ಹಾಗೂ ವಿದ್ಯುತ್ ದೀಪಾಲಂಕಾರಗಳನ್ನು ಬಳಸಿಕೊಂಡ ಕನ್ನಡ ಚಳವಳಿಕಾರ ವಾಟಾಳ್ ನಾಗರಾಜ್ ಅವರು, ಅದರ ಬಾಡಿಗೆಯನ್ನೇ ಕೊಟ್ಟಿಲ್ಲ ಎಂದು ಮಾಗಡಿ ರಸ್ತೆಯ ಜೈ ಹನುಮಾನ್ ಲೈಟ್ ಅಂಡ್ ಸೌಂಡ್ ಅಂಗಡಿಯ ಮಾಲಿಕರಾದ ಪಾರ್ವತಮ್ಮ ಅನ್ನುವ ಮಹಿಳೆ ಅಲಸೂರ್ ಗೇಟ್ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
ನಗರದ ಸರ್ಕಾರಿ ಕಲಾ ಕಾಲೇಜಿನ ಮೈದಾನದಲ್ಲಿ 1998- 99 ಮತ್ತು 1999- 2000 ಸಾಲಿನ ರಾಜ್ಯೋತ್ಸವ ಕಾರ್ಯಕ್ರಮಗಳ ಅಂಗವಾಗಿ ನಿರ್ಮಿಸಿದ್ದ ಮಂಟಪಕ್ಕೆ ವಿದ್ಯುತ್ ದೀಪದ ಅಲಂಕಾರ ಹಾಗೂ ಧ್ವನಿ ವರ್ಧಕ ವ್ಯವಸ್ಥೆ ಮಾಡಲಾಗಿತ್ತು . ಆದರೆ, ಅದರ ಬಾಡಿಗೆ 62 ಸಾವಿರ ರುಪಾಯಿಗಳನ್ನು ಈವರೆಗೆ ಪಾವತಿಸದೆ ವಾಟಾಳ್ ಅವರು ಸತಾಯಿಸುತ್ತಿದ್ದಾರೆ ಎಂದು ಪಾರ್ವತಮ್ಮ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ನವಂಬರ್ ತಿಂಗಳು ಪೂರ್ತಿ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಆಚರಿಸುವ ಕೆಲವು ಕನ್ನಡ ಸಂಘಟನೆಗಳು, ಕನ್ನಡದ ಹೆಸರಿನಲ್ಲಿ ರೋಲ್ಕಾಲ್ ಮಾಡುತ್ತವೆ ಎನ್ನುವ ದೂರು ಇತ್ತೀಚಿನ ವರ್ಷಗಳಲ್ಲಿ ವ್ಯಾಪಕವಾಗುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications