ನಂಜನಗೂಡಿನಲ್ಲಿ ಐದು ಸೆಂಟಿ ಮೀಟರ್ ಮಳೆ
ಬೆಂಗಳೂರು : ನೆರೆರಾಜ್ಯಗಳ ಮೇಲೆರಗಿರುವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಮೈಸೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಿದೆ. ಬೆಂಗಳೂರಿನಲ್ಲಿ ಗುರವಾರ ಬೆಳಗ್ಗಿನಿಂದಲೂ ಮೋಡಕವಿದಿದ್ದು, ಆಗಾಗ್ಗೆ ಹಗುರದಿಂದ ಮಳೆ ಬೀಳುತ್ತಲೇ ಇದೆ.
ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಮಳೆ ಬಿದ್ದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸಾಮಾನ್ಯವಾದ ಒಣಹವೆ ಇತ್ತು. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಯಳಂದೂರು, ನಂಜನಗೂಡುಗಳಲ್ಲಿ ತಲಾ 5 ಸೆಂಟಿ ಮೀಟರ್, ಕುಣಿಗಲ್, ಚಾಮರಾಜನಗರಗಳಲ್ಲಿ ತಲಾ 4 ಸೆಂಟಿ ಮೀಟರ್, ತಿರಮಕೂಡಲು ನರಸೀಪುರ, ಬೇಗೂರುಗಳಲ್ಲಿ ತಲಾ 3 ಸೆಂಟಿ ಮೀಟರ್ ಮಳೆ ಆಗಿದೆ.
ಮೈಸೂರು, ಕೆ.ಜಿ.ಎಫ್‌ಗಳಲ್ಲಿ ತಲಾ 2 ಸೆಂಟಿ ಮೀಟರ್, ಮುಳಬಾಗಲು, ಕೋಲಾರ, ಬಂಗಾರಪೇಟೆ, ಕನಕಪುರಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ರಾಜ್ಯದಲ್ಲಿ ಕನಿಷ್ಠ ಉಷ್ಣಾಂಶ ಉತ್ತರ ಒಳನಾಡಿನಲ್ಲಿ ಹೆಚ್ಚಾಗಿದ್ದರೆ, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು.
ರಾಜ್ಯದಲ್ಲಿ ಕನಿಷ್ಠ ತಾಪಮಾನ ಮೈಸೂರಿನಲ್ಲಿ 15ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರದವರೆಗಿನ ಮುನ್ಸೂಚನೆಯಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿಯ ಕೆಲವುಕಡೆ ಬೀಳುವ ಸಂಭವ ಇದೆ. ಹಗುರ ಮಳೆ ಕೆಲವೆಡೆ ನಿರೀಕ್ಷಿತ.
ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಬೀಳುವ ಸೂಚನೆಗಳಿದ್ದು, ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು, ಪದೇ ಪದೇ ಮಳೆ ಬೀಳುವ ಸಂಭವ ಇದೆ. ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications