30 ಕೋಟಿ ರು. ವೆಚ್ಚದ ನೀರು ಪೂರೈಕೆ ಯೋಜನೆಗೆ ಮಂತ್ರಿಮಂಡಲ ಒಪ್ಪಿಗೆ
ಬೆಂಗಳೂರು : ಹದಿನೇಳು ಕೋಟಿ ರುಪಾಯಿ ವೆಚ್ಚದಲ್ಲಿ ಕಾವೇರಿ ನೀರನ್ನು ಮಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿಸುವ ಯೋಜನೆ ಸೇರಿದಂತೆ 30 ಕೋಟಿ ರುಪಾಯಿ ಒಟ್ಟು ವೆಚ್ಚದ 3 ಕುಡಿಯುವ ನೀರಿನ ಯೋಜನೆಗಳಿಗೆ ಮಂತ್ರಿ ಮಂಡಲ ಶುಕ್ರವಾರ ಅನುಮೋದನೆ ಕೊಟ್ಟಿದೆ.
ರಾಜ್ಯ ವಾರ್ತಾ ಸಚಿವ ಬಿ.ಕೆ.ಚಂದ್ರಶೇಖರ್ ಸುದ್ದಿಗಾರರಿಗೆ ಶುಕ್ರವಾರ ಈ ವಿಷಯ ತಿಳಿಸಿದರು. ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಧಾರವಾಡದ ನರಗುಂದಗಳಿಗೆ ತಲಾ 6.5 ಕೋಟಿ ರುಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗಳಿಗೂ ಮಂತ್ರಿಮಂಡಲ ಸಮ್ಮತಿ ನೀಡಿದೆ. ಕೃಷ್ಣದೇವರಾಯ ದಂತ ವೈದ್ಯಕೀಯ ಕಾಲೇಜನ್ನು ಅಲ್ಪಸಂಖ್ಯಾತ ಸಂಸ್ಥೆ ಎಂದು ಘೋಷಿಸಬೇಕೆಂಬ ಮನವಿಯನ್ನು ಮಂತ್ರಿಮಂಡಲ ತಿರಸ್ಕರಿಸಿತು. ಈ ಸಂಬಂಧ ಮುಂದಿನ ಅರ್ಜಿಗಳನ್ನು ಪರಿಶೀಲಿಸಲು ಸಮಾಜ ಕಲ್ಯಾಣ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲೊಂದು ಸಮಿತಿಯನ್ನು ರಚಿಸಲಾಗಿದೆ ಎಂದರು.
ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಷನ್ನಿನಲ್ಲಿ ವಿಆರ್‌ಎಸ್
ಸರ್ಕಾರೀ ಸ್ವಾಮ್ಯದ ರೋಗಗ್ರಸ್ತ ಸಂಸ್ಥೆ ಕರ್ನಾಟಕ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಷನ್ನಿನಲ್ಲಿ 4.5 ಕೋಟಿ ರುಪಾಯಿಯ ಸ್ವಯಂ ನಿವೃತ್ತಿ ಯೋಜನೆ (ವಿಆರ್‌ಎಸ್) ಜಾರಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಬಿ.ಕೆ.ಸಿ. ತಿಳಿಸಿದರು.
ನಷ್ಟದಲ್ಲಿರುವ ಈ ಸಾರ್ವಜನಿಕ ವಲಯದ ಸಂಸ್ಥೆಯಲ್ಲಿ ಪ್ರಸ್ತುತ 300 ನೌಕರರಿದ್ದು, ಈ ಪೈಕಿ 192 ನೌಕರರಿಗೆ ಸ್ವಯಂ ನಿವೃತ್ತಿ ನೀಡಲಾಗುವುದು. ಇದಲ್ಲದೆ ಸರ್ಕಾರದ ಆದೇಶದಂತೆ ಸಂಸ್ಥೆ ಹೊಸ ಉತ್ಪನ್ನಗಳನ್ನು ತಯಾರಿಸಲು ಆರಂಭಿಸಿದ್ದು, ಇದರಿಂದಾಗುತ್ತಿರುವ ನಷ್ಟ ತುಂಬಲು ಸರ್ಕಾರ 1.16 ಕೋಟಿ ರುಪಾಯಿ ಬಿಡುಗಡೆ ಮಾಡಿದೆ ಎಂದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications