ಬಂಡೀಪರದಲ್ಲಿ 21 ಸೆಂಟಿ ಮೀಟರ್ ಮಳೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಬೀಸಿರುವ ಚಂಡಮಾರುತದ ಪರಿಣಾಮ ಕರ್ನಾಟಕ ರಾಜ್ಯದ ಮೇಲೂ ಆಗಿದ್ದು, ದಕ್ಷಿಣ ಒಳನಾಡಿನ ಅನೇಕಕಡೆ, ಉತ್ತರ ಒಳನಾಡು ಹಾಗೂ ಕರಾವಳಿಯ ತೀರ ಪ್ರದೇಶಗಳಲ್ಲಿ ಚದುರಿದಂತೆ ಮಳೆ ಆಗಿದೆ.
ಸುರಿಯುತ್ತಿರುವ ಭಾರಿ ಮಳೆಗೆ ಮಂಡ್ಯ ಬಳಿ ಹೇಮಾವತಿ ನಾಲೆ ಒಡೆದು ಅಪಾರ ಬೆಳೆ ಹಾನಿಯೂ ಸಂಭವಿಸಿದೆ. ಬಂಡೀಪುರದಲ್ಲಿ 21 ಸೆಂಟಿ ಮೀಟರ್ನಷ್ಟು ಮಳೆ ಆಗಿದ್ದರೆ, ಗುಂಡ್ಲುಪೇಟೆಯಲ್ಲಿ 18 ಸೆಂಟಿ ಮೀಟರ್, ವೀರಾಜಪೇಟೆಯಲ್ಲಿ 12, ನಾಪೋಕ್ಲುವಿನಲ್ಲಿ 8, ಕುಶಾಲನಗರದಲ್ಲಿ 7, ನಂಜನಗೂಡಿನಲ್ಲಿ 6, ಮೂರ್ನಾಡು ಹಾಗೂ ಹೊಳೆ ನರಸೀಪುರಗಳಲ್ಲಿ ತಲಾ 5 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಸೋಮವಾರ ಪೇಟೆ, ಮೈಸೂರು, ಕೆ.ಆರ್.ಎಸ್ಗಳಲ್ಲಿ ತಲಾ 4 ಸೆಂಟಿ ಮೀಟರ್, ಕೆ.ಆರ್. ಪೇಟೆಯಲ್ಲಿ 3 ಸೆಂಟಿ ಮೀಟರ್ ಹಾಗೂ ರಾಜ್ಯದ ಇನ್ನೂ ಅನೇಕ ಪ್ರದೇಶಗಳಲ್ಲಿ 1-2 ಸೆಂಟಿ ಮೀಟರ್ ಮಳೆ ಆಗಿದೆ. ಈ ಮಧ್ಯೆ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕೊಂಚ ಏರು ಪೇರಾಗಿದೆ. ಅತಿ ಕಡಿಮೆ ತಾಪಮಾನ ಶಿವಮೊಗ್ಗದಲ್ಲಿ 14.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಅನೇಕಕಡೆ ಉತ್ತರ ಒಳನಾಡು ಹಾಗೂ ಕರಾವಳಿಯ ಒಂದೆರಡುಕಡೆ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ನಿರೀಕ್ಷೆ ಇದೆ. ತಾಪಮಾನದಲ್ಲಿ ಕೂಡ ಬದಲಾವಣೆ ನಿರೀಕ್ಷಿತ.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಒಂದೆರಡು ಬಾರಿ ಮಳೆ ಬೀಳುವ ಸಂಭವ ಇದೆ. ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications