ಜಿಲ್ಲಾ ಸಾಹಿತ್ಯ ಪರಿಷತ್ತಿಗೂ ಅನುದಾನ - ಚಿಂತನೆ
ಮಾಗಡಿ : ಕನ್ನಡ ಸಾಹಿತ್ಯ ಪರಿಷತ್ತಿಗೆ ರಾಜ್ಯ ಸರಕಾರ ನೀಡುತ್ತಿರುವ ಅನುದಾನದ ಮಾದರಿಯಲ್ಲೇ ಜಿಲ್ಲಾ ಸಾಹಿತ್ಯ ಪರಿಷತ್ತುಗಳಿಗೂ ಅನುದಾನ ನೀಡುವ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ. ಈ ವಿಷಯವನ್ನು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಮಾಗಡಿಯ ಕೆಂಪೇಗೌಡ ಬಯಲು ರಂಗಮಂದಿರಲ್ಲಿ ಏರ್ಪಡಿಸಲಾಗಿದ್ದ 6ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಸಚಿವರು ಸಾಹಿತಿಗಳು ಸಂಪನ್ಮೂಲ ಕ್ರೋಡೀಕರಿಸಿಕೊಂಡು ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಬೇಕು ಎಂದು ಹೇಳಿದರು.
ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಅವರ ಗೈರುಹಾಜರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಎನ್. ಬಸವಾರಾಧ್ಯ ಅವರು ಈ ಸಂದರ್ಭದಲ್ಲಿ ಮಾಗಡಿ ಐಸಿರಿ ಎಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು, ಕವಿ ಡಾ. ಸಿದ್ಧಲಿಂಗಯ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರೇವಣ್ಣ ಅವರು, ಈ ಬೃಹತ್ ಸಾಂಸ್ಕೃತಿಕ ಉತ್ಸವದ ಸ್ಮರಣೆಯಾಗಿ ಮಾಗಡಿಯಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯೋತ್ಸವವನ್ನೂ ಆಚರಿಸಲಾಯಿತು. ರಾಜ್ಯ 45 ರಾಜ್ಯೋತ್ಸವ ಆಚರಿಸಿದ್ದರೂ, ಕನ್ನಡದ ಏಳಿಗೆ ಎಷ್ಟಾಗಿದೆ ಎಂಬ ಬಗ್ಗೆ ಚಿಂತನೆ ಮಾಡುವುದು ಅಗತ್ಯ ಎಂಬ ಅಭಿಪ್ರಾಯ ಸಮ್ಮೇಳನದಲ್ಲಿ ವ್ಯಕ್ತವಾಯಿತು. ಸಮಾರಂಭದ ನಿಮಿತ್ತ ಪುಸ್ತಕ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.
ಮುಖಪುಟ / ಊರು ಕೇರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications