ಬಿ.ಸಿ. ರಾಮಚಂದ್ರ ಶರ್ಮರಿಗೆ ಕೈಲಾಸಂ ಪ್ರಶಸ್ತಿ
ಬೆಂಗಳೂರು : ಗೊರೂರು ಪ್ರತಿಷ್ಠಾನ ನಾಡಿನ ಹಿರಿಯ ಸಾಹಿತಿ ಡಾ. ಬಿ.ಸಿ. ರಾಮಚಂದ್ರ ಶರ್ಮ ಅವರಿಗೆ 2000 ಸಾಲಿನ ಕೈಲಾಸಂ ಪ್ರಶಸ್ತಿ ಪ್ರಕಟಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 3ರ ಭಾನುವಾರ ಮಿಥಿಕ್ ಸೊಸೈಟಿಯಲ್ಲಿ ನಡೆಯಲಿದೆ.
1925ರ ನವೆಂಬರ್ 28ರಂದು ಜನಿಸಿದ ರಾಮಚಂದ್ರ ಶರ್ಮರಿಗೆ 75 ವರ್ಷ ತುಂಬಿರುವ ಸಂದರ್ಭದಲ್ಲಿ ಅಭಿನಂದನಾ ಸಮಾರಂಭವೂ ಜರುಗಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಶರ್ಮರ ಬಗ್ಗೆ : ಡಾ. ಬಿ.ಸಿ. ರಾಮಚಂದ್ರ ಶರ್ಮರ ಪೂರ್ಣ ಹೆಸರು, ಬೋಗಾದಿ ಚಂದ್ರಶೇಖರ ಶರ್ಮ ರಾಮಚಂದ್ರ ಶರ್ಮ. ಬೆಂಗಳೂರು, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದ ಇವರು, ಲಂಡನ್ನಲ್ಲಿ ಪಿಎಚ್ಡಿ ಪದವಿ ಪಡೆದರು. ಇಂಗ್ಲೆಂಡ್, ಇಥಿಯೋಫಿಯಾ, ಬೆಂಗಳೂರಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು, ಜಾಂಬಿಯಾ ಹಾಗೂ ಯುನೆಸ್ಕೋದಲ್ಲಿ ಮನಃಶಾಸ್ತ್ರಜ್ಞರಾಗಿಯೂ ದುಡಿದವರು.
ನವಪ್ರಜ್ಞೆಯ ಕವಿ ಎಂದೇ ಖ್ಯಾತರಾಗಿರುವ ಶರ್ಮರು, ಕತೆಗಾರರಾಗಿ, ನಾಟಕಕಾರಗಾಗಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಏಳುಸುತ್ತಿನ ಕೋಟೆ, ಹೃದಯಗೀತೆ, ಮಾತು ಮಾಟ, ಹೇಸರಗತ್ತೆ, ಮಂದಾರ ಕುಸುಮ, ಏಳನೆಯ ಜೀವ, ಕತೆಗಾರನ ಕತೆ, ಬಾಳ ಸಂಜೆ, ವೈತರಣಿ, ಈ ಶತಮಾನದ ನೂರು ಇಂಗ್ಲಿಷ್ ಕವನಗಳು ಮುಂತಾದ ಹಲವು ಕೃತಿಗಳನ್ನು ಶರ್ಮರು ರಚಿಸಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ










Click it and Unblock the Notifications