ವೀರಪ್ಪನ್ ಶಿಕಾರಿಗೆ ತಂತ್ರ ರೂಪಿಸಲು ನಗರದಲ್ಲಿ ಸಮಾಲೋಚನೆ
ಬೆಂಗಳೂರು : ಕಾಡುಗಳ್ಳ ಹಾಗೂ ನರಹಂತಕ ವೀರಪ್ಪನ್ ವಿರುದ್ಧದ ಜಂಟಿ ಕಾರ್ಯಾಚರಣೆಗೆ ಅಂತಿಮ ರೂಪ ಕೊಡುವ ನಿಟ್ಟಿನಲ್ಲಿ ತಮಿಳುನಾಡು ವಿಶೇಷ ಕಾರ್ಯಪಡೆಯ ನೇತೃತ್ವ ವಹಿಸಿರುವ ಐ.ಜಿ.ಪಿ. ಬಾಲಚಂದ್ರನ್ ಅವರು, ಶನಿವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ಆರಂಭಿಸಿದ್ದಾರೆ.
ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಕೇಂದ್ರ ಸರಕಾರವು ನುರಿತ ಸಿಬ್ಬಂದಿ ಹಾಗೂ ಆತ್ಯಾಧುನಿಕ ಶಸ್ತ್ರಾಸ್ತ್ರಗಳ ನೆರವು ನೀಡುತ್ತಿರುವ ಹಿನ್ನೆಲೆಯಲ್ಲಿ ಜಂಟಿ ಕಾರ್ಯಪಡೆಯ ಕಾರ್ಯಾಚರಣೆ ಹೇಗಿರಬೇಕು ಎಂಬು ಬಗ್ಗೆ ಬಾಲಚಂದ್ರನ್ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಶನಿವಾರ ಸಿ. ದಿನಕರ್ ಹಾಗೂ ಕರ್ನಾಟಕ ಕಾರ್ಯಪಡೆಯ ಮುಖ್ಯಸ್ಥ ಎಚ್.ಟಿ. ಸಾಂಗ್ಲಿಯಾನಾ ಅವರನ್ನು ಭೇಟಿ ಮಾಡಿದ ವಿ. ಬಾಲಚಂದ್ರನ್ ಹೊಸ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ಕನ್ನಡದ ವರನಟ ರಾಜ್ಕುಮಾರ್ ಅವರ ಅಪಹರಣ ಪ್ರಕರಣದಿಂದ ಕಂಗೆಟ್ಟಿದ್ದ ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರಗಳು ರಾಜ್ಕುಮಾರ್ ಬಿಡುಗಡೆಯ ನಂತರ ದಶಕಗಳಿಂದಲೂ ಎರಡೂ ಸರಕಾರಗಳಿಗೆ ತಲೆನೋವಾಗಿ ಪರಿಣಮಿಸಿರುವ ವೀರಪ್ಪನ್ ಹುಟ್ಟಡಗಿಸುವ ನಿಟ್ಟಿನಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿವೆ.
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications