ವೀರಪ್ಪನ್ ಭೇಟೆಗೆ ಕಾಡಿಗೆ ನುಗ್ಗಲಿರುವ ಎರಡು ಸಾವಿರ ಶಸ್ತ್ರಸಜ್ಜಿತ ಪೊಲೀಸರು
ಬೆಂಗಳೂರು : ಗಡಿ ಭದ್ರತಾಪಡೆಯ ಸಾವಿರ ಯೋಧರು ಹಾಗೂ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡುಗಳಿಗೆ ಸೇರಿದ ಎರಡು ಸಾವಿರ ಯೋಧರು ನರಹಂತಕ ವೀರಪ್ಪನ್ ಹಾಗೂ ಆತನ ಸಹಚರರ ಭೇಟೆಗೆ ಕಾಡಿಗೆ ನುಗ್ಗಲಿದ್ದಾರೆ ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಶನಿವಾರ ಹೇಳಿದ್ದಾರೆ.
ವೀರಪ್ಪನ್ ವಿರುದ್ಧದ ಜಂಟಿ ಕಾರ್ಯಾಚರಣೆಗೆ ಅಂತಿಮ ರೂಪ ಕೊಡುವ ನಿಟ್ಟಿನಲ್ಲಿ ತಮಿಳುನಾಡು ವಿಶೇಷ ಕಾರ್ಯಪಡೆಯ ನೇತೃತ್ವ ವಹಿಸಿರುವ ಐ.ಜಿ.ಪಿ. ಬಾಲಚಂದ್ರನ್ ಅವರು, ಶನಿವಾರ ಬೆಂಗಳೂರಿನಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ದಿನಕರ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಮುಗಿದ ಸಮಾಲೋಚನೆ : ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಕೇಂದ್ರ ಸರಕಾರವು ನುರಿತ ಸಿಬ್ಬಂದಿ ಹಾಗೂ ಆತ್ಯಾಧುನಿಕ ಶಸ್ತ್ರಾಸ್ತ್ರಗಳ ನೆರವು ನೀಡುತ್ತಿರುವ ಹಿನ್ನೆಲೆಯಲ್ಲಿ ಜಂಟಿ ಕಾರ್ಯಪಡೆಯ ಕಾರ್ಯಾಚರಣೆ ಹೇಗಿರಬೇಕು ಎಂಬು ಬಗ್ಗೆ ಬಾಲಚಂದ್ರನ್ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್‌ಹಾಗೂ ಕರ್ನಾಟಕ ವಿಶೇಷ ಕಾರ್ಯಪಡೆಯ ನೇತೃತ್ವ ವಹಿಸಿರುವ ಸಾಂಗ್ಲಿಯಾನ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಕೇಂದ್ರದ ಗಡಿ ಭದ್ರತಾಪಡೆಯ ನೆರವಿನಿಂದ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗುವುದೆಂದು ವಿ. ಬಾಲಚಂದ್ರನ್ ಅವರು ತಿಳಿಸಿದರು. ವೀರಪ್ಪನ್ ಬಂಧನದ ಕಾರ್ಯಾಚರಣೆಗೆ ಕಾಲಮಿತಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ವೀರಪ್ಪನ್ ತನ್ನ ಸುಮಾರು 15 ಬೆಂಬಲಿಗರೊಂದಿಗೆ ಕಾಡಿನಲ್ಲೇ ಇದ್ದಾನೆ ಎಂದು ಪ್ರಶ್ನೆಯಾಂದಕ್ಕೆ ಉತ್ತರಿಸಿದ ಅವರು ವೀರಪ್ಪನ್ ಜೊತೆಗೆ ಕೆಲವು ತಮಿಳು ಪ್ರತ್ಯೇಕತಾವಾದಿಗಳು ಕೈಜೋಡಿಸಿರಬಹುದು ಆದರೆ ಎಲ್ಟಿಟಿಈ ವೀರಪ್ಪನ್ ನೆರವಿಗೆ ಬಂದಿದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದರು.
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications