Get Updates
Get notified of breaking news, exclusive insights, and must-see stories!

ಪ್ರತಿಭಾವಂತ ಮಕ್ಕಳಿಗೆ ಸರಕಾರದಿಂದ ಬಾಲ ಪ್ರತಿಭೆ ಮತ್ತು ಕಿಶೋರ ಪ್ರಶಸ್ತಿ

ಮೈಸೂರು: ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ರಾಜ್ಯ ಸರಕಾರವು ಕಿಶೋರ ಪ್ರತಿಭೆ ಮತ್ತು ಬಾಲ ಪ್ರಶಸ್ತಿ ಗಳನ್ನು ನೀಡಲ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್‌ ಹೇಳಿದ್ದಾರೆ.

ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಈ ಪ್ರಶಸ್ತಿ ನೀಡಲಾಗುವುದು. ಬಾಲ ಪ್ರತಿಭೆ ಪ್ರಶಸ್ತಿಯು 5 ಸಾವಿರ ರೂಪಾಯಿ ಮತ್ತು ಸ್ಮರಣಿಕೆ, ಕಿಶೋರ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ನೆನಪಿನ ಕಾಣಿಕೆಯನ್ನು ಒಳಗೊಂಡಿದೆ ಎಂದು ರಾಣಿ ಸತೀಶ್‌ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ಈ ಸಾಲಿನ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಡಿಸೆಂಬರ್‌ 16ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಟ್ಟುಕೊಳ್ಳಲಾಗಿದೆ. ಸಂಗೀತ, ನೃತ್ಯ, ಜಾನಪದ, ವಾದ್ಯ ಸಂಗೀತ ಮತ್ತು ಚಿತ್ರಕಲೆಯಲ್ಲಿ ಪ್ರತಿಭೆ ಇರುವ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+