ಅರ್ಧದಲ್ಲಿ ಶಾಲೆ ಬಿಟ್ಟಿರುವ ಮಕ್ಕಳಿಗೆ ರಾಜ್ಯ ಮಟ್ಟದ ಪಠ್ಯ ಸಂಪರ್ಕ ಕೋರ್ಸು
ಬೀದರ್ : ದೇಶದಲ್ಲಿಯೇ ಪ್ರಥಮ ಬಾರಿಗೆ, ಅರ್ಧದಲ್ಲಿಯೇ ಶಾಲೆಯನ್ನು ಬಿಟ್ಟಿರುವ ಸುಮಾರು ಮೂರು ಲಕ್ಷ ಮಕ್ಕಳಿಗೆ ರಾಜ್ಯ ಮಟ್ಟದ ಪಠ್ಯ ಸಂಪರ್ಕ ಕೋರ್ಸು ಕಾರ್ಯಕ್ರಮವನ್ನು ಗುಲ್ಬರ್ಗಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹೆಚ್. ವಿಶ್ವ ನಾಥ್ ಹೇಳಿದ್ದಾರೆ.
ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಬರುವ ವರ್ಷ ಮಾರ್ಚ್ನಲ್ಲಿ ಪಠ್ಯ ಸಂಪರ್ಕ ಕೋರ್ಸು ಕಾರ್ಯಕ್ರಮ ನಡೆಯುವುದು ಎಂದರು. ಎಲ್ಲ ಮಕ್ಕಳಿಗೂ ಪ್ರಾಥಮಿಕ ಶಿಕ್ಷಣ ನೀಡುವ ದೃಷ್ಠಿಯಿಂದ ಸರಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಶಾಲೆಗೆ ಸೇರಿದ ನಂತರ ಹಲವು ಅಡೆತಡೆಗಳಿಂದ ಓದು ಮುಂದುವರಿಸಲಾಗದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳನ್ನು ಮತ್ತೆ ಶಾಲೆಗೆ ಸೇರಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಕೈಗೆತ್ತಿಕೊಂಡಿದೆ. ಶಾಲೆಯನ್ನು ಅರ್ಧದಲ್ಲಿಯೇ ಬಿಟ್ಟ ಮಕ್ಕಳ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು.
ಏಳನೆಯ ತರಗತಿವರೆಗಿನ ಎಲ್ಲ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಒದಗಿಸಲಾಗುತ್ತಿದೆ. ಬಾಲಕಿಯರಿಗೆ ಪದವಿ ಪೂರ್ವ ಶಿಕ್ಷಣದ ವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಬರುವ ವರ್ಷದಿಂದ ಬಾಲಕರಿಗೂ ಉಚಿತ ಶಿಕ್ಷಣ ನೀಡಲು ಪ್ರಯತ್ನಿಸಲಾಗುವುದು ಎಂದು ಅವರು ವಿವರಿಸಿದರು.
(ಇನ್ಫೋ ವಾರ್ತೆ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications