ಗುಡ್ಡಗಾಡು ಜನರಿಗೆ ಸಂದೇಶಕಾರರಾಗಲು ಒತ್ತಾಯಿಸುತ್ತಿರುವ ಎಸ್ಟಿಎಫ್
ಚೆನ್ನೈ : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ವಿಶೇಷ ಕಾರ್ಯಪಡೆಯ ಪೊಲೀಸರು, ಸತ್ಯಮಂಗಲಂ ಅರಣ್ಯ ವಲಯದ ಗುಡ್ಡಗಾಡು ಜನರನ್ನು ಸಂದೇಶಕಾರರಾಗುವಂತೆ ಒತ್ತಾಯಿಸುತ್ತಿದ್ದಾರೆ ಎಂದು ನಾಗರಿಕ ಸ್ವಾತಂತ್ರ್ಯ ಒಕ್ಕೂಟ (ಪಿಯುಸಿಲ್) ಆರೋಪಿಸಿದೆ.
ತಮಿಳುನಾಡು ಹಾಗೂ ಪಾಂಡಿಚೆರಿ ಘಟಕಗಳ ಅಧ್ಯಕ್ಷ ರವಿಕುಮಾರ್ ಅವರು ಸೋಮವಾರ ಚೆನ್ನೈನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಆರೋಪ ಮಾಡಲಾಗಿದೆ. ಪೊಲೀಸರು ಗುಡ್ಡಗಾಡು ಜನರ ಮೇಲೆ ಒತ್ತಡ ಹೇರದಂತೆ ಉಭಯ ರಾಜ್ಯ ಸರ್ಕಾರಗಳು ತಕ್ಷಣವೇ ಮಧ್ಯ ಪ್ರವೇಶಿಸಬೇಕು ಎಂದು ಭಾನುವಾರ ನಡೆದ ಪಿಯುಸಿಎಲ್ನ ಕಾರ್ಯ ನಿರ್ವಾಹಕ ಸಮಿತಿಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಪ್ರಸ್ತುತ ಎಸ್ಟಿಎಫ್ನಲ್ಲಿರುವ ಅಧಿಕಾರಿಗಳು ಈಗಾಗಲೇ ಮಾನವ ಹಕ್ಕುಗಳ ಉಲ್ಲಂಘನೆಯ ಆಪಾದನೆ ಹೊತ್ತಿದ್ದು, ಅಂತಹವರನ್ನು ಕಾರ್ಯಪಡೆಯಿಂದ ಪ್ರತ್ಯೇಕಿಸಬೇಕು. ವೀರಪ್ಪನ್ ಬಂಧನ ಕಾರ್ಯಾಚರಣೆಯ ನೆಪದಲ್ಲಿ ನಡೆದ ಹಿಂಸಾತ್ಮಕ ಕೃತ್ಯಗಳ ಕುರಿತು ವಿವರವಾದ ತನಿಖೆ ನಡೆಸಿ, ಅಪರಾಧಿಗಳನ್ನು ಶಿಕ್ಷಿಸಬೇಕು ಎಂದು ರವಿಕುಮಾರ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications