ಮೌಲ್ಯಯುತ ವ್ಯವಸ್ಥೆಗೆ ಸಾಹಿತ್ಯ, ಸಂಗೀತ, ಕಲೆ ಸಹಕಾರಿ: ಶರ್ಮಾ
ಬೆಂಗಳೂರು : 75 ವರ್ಷ ತುಂಬಿದ ಕನ್ನಡದ ಸಾಹಿತಿ ಡಾ. ಬಿ.ಸಿ. ರಾಮಚಂದ್ರಶರ್ಮ ಅವರಿಗೆ ಅಭಿನಂದನೆ ಹಾಗೂ ಪ್ರತಿಷ್ಠಿತ ಗೊರುರು ಪ್ರತಿಷ್ಠಾನದ ಕೈಲಾಸಂ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ನಗರದ ಮಿಥಿಕ್ ಸೊಸೈಟಿಯಲ್ಲಿ ಜರುಗಿತು.
ನೇತ್ರತಜ್ಞ ಡಾ. ಎಂ.ಸಿ. ಮೋದಿ ಅವರು, ಶರ್ಮರಿಗೆ ಕೈಲಾಸಂ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ರಾಮಚಂದ್ರ ಶರ್ಮರು ಮೌಲ್ಯಯುತವಾಗಿ ವ್ಯವಸ್ಥೆಗೆ ಸಾಹಿತ್ಯ, ಸಂಗೀತ, ಕಲೆ ಸಹಕಾರಿಯಾಗಿದೆ ಎಂದರು. ಸಮೂಹದ ನಂಬಿಕೆ ಹಾಗೂ ವ್ಯಕ್ತಿಯ ನಂಬಿಕೆ ಭಿನ್ನವಾದರೆ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದೂ ಅಭಿಪ್ರಾಯಪಟ್ಟರು. ಸ್ವಂತಿಕೆಯನ್ನು ಕಾಪಾಡಿಕೊಳ್ಳುವಂತೆ ಯುವಕರಿಗೆ ಕರೆಯಿತ್ತರು.
ಅಭಿನಂದನಾ ಭಾಷಣ ಮಾಡಿದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರು, ಶರ್ಮರ ಮನಸ್ಸಿನಲ್ಲಿ ಗೊಂದಲವಿಲ್ಲ. ಅವರಲ್ಲಿ ಸ್ಪಷ್ಟ ನಿಲುವಿದೆ. ಶರ್ಮರು ಯಾವುದೇ ವಿಷಯದ ಜತೆ ಸುಲಭವಾಗಿ ರಾಜಿ ಮಾಡಿಕೊಳ್ಳುವವರಲ್ಲ ಎಂದರು.
ಇದೇ ಸಂದರ್ಭದಲ್ಲಿ ಕವಯತ್ರಿ ವಿ. ರಾಣಿ ಗೋವಿಂದರಾಜು ಅವರಿಗೆ ಗೊರುರು ಪ್ರತಿಷ್ಠಾನದ ವತಿಯಿಂದ ಶಾಲು ಹೊದಿಸಿ, ನೆನಪಿನ ಕಾಣಿಕೆಯಿತ್ತು ರಾಜ್ಯೋತ್ಸವ ಪುರಸ್ಕಾರವನ್ನೂ ನೀಡಲಾಯಿತು. ಸಮಾರಂಭದಲ್ಲಿ ನಿವೃತ್ತ ನ್ಯಾಯಾಧೀಶರಾದ ನಿಟ್ಟೂರು ಶ್ರೀನಿವಾಸರಾವ್, ಪದ್ಮಾ ರಾಮಚಂದ್ರ ಶರ್ಮ ಮೊದಲಾದವರು ಪಾಲ್ಗೊಂಡಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications