‘ನಕ್ಷತ್ರ ವೀಕ್ಷಣೆ’ಗೆ ಮೋಡಗಳ ಅಡ್ಡಿ
ಬೆಂಗಳೂರು : ಖಗೋಳಶಾಸ್ತ್ರ - ನಕ್ಷತ್ರ ಹಾಗೂ ಆಕಾಶಕಾಯಗಳ ಬಗ್ಗೆ ಶ್ರೋತೃಗಳಿಗೆ ಅರಿವು ಮೂಡಿಸಲು ಬೆಂಗಳೂರು ಆಕಾಶವಾಣಿ ಭಾನುವಾರ ರಾತ್ರಿ 8 ಗಂಟೆಗೆ ಏರ್ಪಡಿಸಿದ್ದ 'ನಕ್ಷತ್ರವೀಕ್ಷಣೆ" ನೇರಪ್ರಸಾರಕ್ಕೆ ಮೋಡಗಳು ಅಡ್ಡಿ ಪಡಿಸಿದವು. ನಕ್ಷತ್ರಗಳೇ ಕಾಣದಷ್ಟು ದಟ್ಟವಾಗಿ ಮೋಡಗಳು ಮುಸುಕಿದ್ದ ಕಾರಣ ಈ ಕಾರ್ಯಕ್ರಮ ರದ್ದಾಯಿತು. ಮುಂದಿನ ದಿನಾಂಕ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಆಕಾಶವಾಣಿ ಕೇಂದ್ರ ಹೇಳಿದೆ.
ಸೋಮವಾರವೂ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದಿತ್ತು. ಚಳಿಯ ಅನುಭವ. ಸಣ್ಣಗೆ ನಾಲ್ಕು ಹನಿಯೂ ಬಿತ್ತು. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆ ಆಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇತ್ತು.
ದೇವನಹಳ್ಳಿ 2 ಸೆಂಟಿ ಮೀಟರ್ ಹಾಗೂ ಬಾಗೇಪಲ್ಲಿ, ಅಜ್ಜಂಪುರಗಳಲ್ಲಿ ತಲಾ ಒಂದು ಸೆಂಟಿ ಮೀಟರ್ ಮಳೆ ಬಿದ್ದಿದೆ. ಉತ್ತರ ಒಳನಾಡಿನ ಕೆಲವುಕಡೆ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಕರಾವಳಿಯ ಕೆಲವೆಡೆ ಏರಿಕೆ ಇತ್ತು. ದಕ್ಷಿಣ ಒಳನಾಡಿನಲ್ಲಿ ಕೊಂಚ ಬದಲಾವಣೆ ಕಂಡು ಬಂತು. ಉತ್ತರ ಒಳನಾಡು ಹಾಗೂ ಕರಾವಳಿಯ ಅನೇಕ ಕಡೆಗಳಲ್ಲಿ ತಾಪಮಾನ ಸಾಮಾನ್ಯ ಮಟ್ಟಕ್ಕಿಂತಲೂ ಹೆಚ್ಚಾಗಿತ್ತು.
ಹವಾಮಾನ ವೀಕ್ಷಣಾಲಯ ನೀಡಿರುವ ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆಯೇ ಮುಂದುವರಿಯಲಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಹಗುರವಾಗಿ ಮಳೆ ಬೀಳುವ ನಿರೀಕ್ಷೆ ಇದೆ. ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications