ಉತ್ತರ ಕರ್ನಾಟಕ ಅಭಿವೃದ್ಧಿಗೆ 43 ಸೇತುವೆಗಳ ನಿರ್ಮಾಣ : ಧರ್ಮಸಿಂಗ್
ಗುಲ್ಬರ್ಗಾ : ಉತ್ತರ ಕರ್ನಾಟಕ ಪ್ರದೇಶದಲ್ಲಿ ಸುಮಾರು 10 ಕೋಟಿ ರುಪಾಯಿಗಳ ವೆಚ್ಚದಲ್ಲಿ 43 ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಈ ವಿಷಯವನ್ನು ಲೋಕೋಪಯೋಗಿ ಸಚಿವರಾದ ಧರ್ಮಸಿಂಗ್ ಸೋಮವಾರ ಇಲ್ಲಿ ತಿಳಿಸಿದ್ದಾರೆ.
ಹೈದರಾಬಾದ್ - ಬಿಜಾಪುರ ಮಾರ್ಗದ ಗುರುಮಿಟ್ಕಲ್ ಸಮೀಪ ಸೇತುವೆಯ ಕಾಮಗಾರಿ ಆರಂಭಕ್ಕಾಗಿ ಶಂಕುಸ್ಥಾಪನೆ ನೆರವೇರಿಸಿದ ಸಚಿವರು, ಈ ಸೇತುವೆಯ ನಿರ್ಮಾಣದಿಂದ ತೆಲಂಗಾಣ ಹಾಗೂ ಮುಂಬಯಿ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಕೃಷ್ಣ ನೇತೃತ್ವದ ಸರಕಾರ ಸಂಪೂರ್ಣ ಗಮನ ಹರಿಸಿದೆ. ಆರ್ಥಿಕವಾಗಿ ಹಿಂದುಳಿದಿರುವ ಜಿಲ್ಲೆಗಳ ಅಭಿವೃದ್ಧಿಗೆ ಗಮನ ಹರಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಮೂಲಸೌಕರ್ಯ ನಿಧಿಯಿಂದ ರಾಜ್ಯಕ್ಕೆ 400 ಕೋಟಿ ರುಪಾಯಿ ನೀಡಲು ನಬಾರ್ಡ್ ಕೂಡ ಒಪ್ಪಿದೆ. ಈ 400 ಕೋಟಿ ರುಪಾಯಿಗಳಲ್ಲಿ 175 ಕೋಟಿ ರುಪಾಯಿಗಳನ್ನು ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಬಳಸಲಾಗುವುದು ಎಂದು ಸಚಿವರು ಹೇಳಿದರು.
ಕೇಂದ್ರ ರಸ್ತೆ ನಿಧಿಯಿಂದಲೂ ರಾಜ್ಯಕ್ಕೆ 57 ಕೋಟಿ ರುಪಾಯಿ ದೊರಕುತ್ತಿದೆ ಎಂದರು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಜಿಲ್ಲೆಯ ಪ್ರಮುಖ ರಸ್ತೆಯಾಗಿರುವ ಗುರುಮಿಟ್ಕಲ್ ರಸ್ತೆಯನ್ನು ಹೆದ್ದಾರಿಯ ದರ್ಜೆಗೆ ಏರಿಸಬೇಕು ಎಂದು ಅಭಿಪ್ರಾಯಪಟ್ಟರು. ಜಿ.ಪಂ. ಅಧ್ಯಕ್ಷ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ಚೆನ್ನಾರೆಡ್ಡಿ ಮೊದಲಾದವರು ಹಾಜರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications