ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರ
ಹೊಸಕೋಟೆ : ಕೃಷಿ ಹಾಗೂ ರೈತರ ಉಪ ಕಸುಬುಗಳಿಗೆ ತಾಂತ್ರಿಕತೆಯ ಲೇಪ ನೀಡಲು ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ತಾಲ್ಲೂಕಿನ ಅನುಗೊಂಡನಹಳ್ಳಿಯಲ್ಲಿ ಈಗಾಗಲೇ ರೈತ ಸಂಪರ್ಕ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ.ಕೆ. ಧರ್ಮರಾಜನ್ ತಿಳಿಸಿದ್ದಾರೆ.
ತಾಲ್ಲೂಕಿನ ತವಟಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಜಿಪಿಯು- 28 ತಳಿ ರಾಗಿ ಬೆಳೆ ಕ್ಷೇತ್ರೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಅಧಿಕ ಇಳುವರಿ ಶಕ್ತಿ ಹೊಂದಿರುವ ಹೊಸ ತಳಿಯು ಇಣಕು ರೋಗ ತಡೆಗಟ್ಟುವ ಶಕ್ತಿ ಹೊಂದಿದೆ, ರೈತರು ಹೊಸ ತಳಿಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದರು.
ಕ್ರಿಬ್ಕೋದ ರಾಜ್ಯ ಮಾರಾಟ ವ್ಯವಸ್ಥಾಪಕ ಎಚ್.ಪಿ. ಮಂಜುನಾಥ್ ಕ್ಷೇತ್ರೋತ್ಸವವನ್ನು ಉದ್ಘಾಟಿಸಿದರು. ಕೃಷಿ ವಿವಿಯ ವಿಸ್ತರಣಾ ಮುಖ್ಯಸ್ಥ ಯಲ್ಲಪ್ಪ , ಸಹಾಯಕ ಪ್ರಾಧ್ಯಾಪಕ ಕೆ.ಎನ್. ಚಂದ್ರೇಗೌಡ, ಕ್ರಿಬ್ಕೋ ಅಧಿಕಾರಿ ವಿ. ರಾಮಣ್ಣ ಉತ್ಸವದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications