ಬೆಂಗಳೂರೊಂದು ಮೃತ್ಯು ಕೂಪ
ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಂತೆಯೇ ಅಪಘಾತಗಳ ಸಂಖ್ಯೆ ಕೂಡ. ಬೆಂಗಳೂರಿನಲ್ಲಿ ನಿತ್ಯವೂ ಹತ್ತಾರು - ನೂರರು ದೊಡ್ಡ ಹಾಗೂ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ.
ಆದರೆ, ಈ ಅಪಘಾತಗಳಲ್ಲಿ ಗಾಯಗೊಂಡವರೆಷ್ಟು, ಸಾವನ್ನಪ್ಪಿದವರೆಷ್ಟು ಎಂದು ನಿಮಗೆ ಗೊತ್ತೆ? ಪ್ರತಿವರ್ಷವೂ ಬೆಂಗಳೂರಿನಲ್ಲಿ ಸಂಭವಿಸುವ ಅಪಘಾತಗಳಲ್ಲಿ ಸುಮಾರು 700 ಮಂದಿ ಸಾವನ್ನಪ್ಪುತ್ತಾರೆ. ಕನಿಷ್ಠ ಏಳು ಸಾವಿರ ಮಂದಿ ಗಾಯಗೊಳ್ಳುತ್ತಾರೆ. ಕಳೆದ ಒಂದು ವಾರದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 24 ಜನರು ಸತ್ತಿದ್ದಾರೆ. 110 ಜನರು ಗಾಯಗೊಂಡಿದ್ದಾರೆ.
ಈ ವಿಷಯವನ್ನು ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಯಶವಂತಪುರದಲ್ಲಿ ಬೆಂಗಳೂರು ಉತ್ತರ ವಲಯ ಸಂಚಾರ ಉಪ ವಿಭಾಗದ ಪೊಲೀಸರು ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಏಳರಿಂದ 15 ವರ್ಷ ವಯಸ್ಸಿನ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮರಣಹೊಂದುತ್ತಿದ್ದಾರೆ ಎಂಬ ಅಂಕಿ ಅಂಶವನ್ನೂ ನೀಡಿದರು.
22.52 ಲಕ್ಷ ರು. ದಂಡ : ಈ ಮಧ್ಯೆ ನಗರ ಸಂಚಾರಿ ಪೊಲೀಸರು ನವೆಂಬರ್ 26ರಿಂದ ಡಿಸೆಂಬರ್ 2ರವರೆಗಿನ ಒಂದು ವಾರದ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ ಹಾಗೂ ಪೊಲೀಸ್ ಕಾಯಿದೆ ಉಲ್ಲಂಘಿಸಿದ 18,230 ಪ್ರಕರಣಗಳಲ್ಲಿ ಒಟ್ಟು 22.52 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ್ದಾರೆ.
ವಾಹನ ನಿಲುಗಡೆ ಇಲ್ಲದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ, ಸಂಚಾರಕ್ಕೆ ಅಡಚಣೆ ಉಂಟುಮಾಡಿದ 2.947 ವಾಹನಗಳನ್ನು ಹಿಡಿದು, ಚಾಲಕರಿಂದ 3.31 ಲಕ್ಷ ರುಪಾಯಿ ದಂಡ ವಸೂಲು ಮಾಡಲಾಗಿದೆ. ದ್ವಿಚಕ್ರ ವಾಹನ ಚಾಲಕರ ವಿರುದ್ಧ 7,974 ಕೇಸು ದಾಖಲಿಸಿಕೊಳ್ಳಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications