ಸೀಬರ್ಡ್ ನಿರಾಶ್ರಿತರಿಗಾಗಿ 10 ಕೋಟಿ ವೆಚ್ಚದಲ್ಲಿಮೀನುಗಾರಿಕಾ ಬಂದರು
ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ಅಮದಹಳ್ಳಿ ಸಮೀಪ ಸೀಬರ್ಡ್ ನಿರಾಶ್ರಿತರಿಗಾಗಿ 10 ಕೋಟಿ ರುಪಾಯಿ ವೆಚ್ಚದ ಮೀನುಗಾರಿಕಾ ಬಂದರನ್ನು ಸ್ಥಾಪಿಸಲು ಕೇಂದ್ರ ರಕ್ಷಣಾ ಸಚಿವಾಲಯ ನಿರ್ಧರಿಸಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಯೋಜನೆಗೆ ಒಪ್ಪಿಗೆ ನೀಡಿದ್ದು, ಕಾಮಗಾರಿಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುವುದು ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು ಹೇಳಿದರು. ಮಂಗಳೂರು ಹಳೆಯ ಬಂದರನ್ನು 75 ಲಕ್ಷ ರುಪಾಯಿ ವೆಚ್ಚದಲ್ಲಿ ವಿಸ್ತರಿಸಲಾಗುವುದು. 8.32 ಕೋಟಿ ರುಪಾಯಿಗಳ ಗಂಗೊಳ್ಳಿ ಮೀನುಗಾರಿಕಾ ಬಂದರನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೆತ್ತಿಕೊಳ್ಳಲಾಗುವುದು. 1.3 ಕೋಟಿ ರುಪಾಯಿ ಅಂದಾಜಿನ ಕಾರವಾರ ಮೀನುಗಾರಿಕೆ ಎರಡನೇ ಹಂತದ ಯೋಜನೆ ಪ್ರಾರಂಭಿಕ ಹಂತದಲ್ಲಿದೆ ಎಂದು ರೈ ಹೇಳಿದರು.
ರಸ್ತೆಗಳನ್ನು ಬಂದರುಗಳಿಗೆ ಸಂಪರ್ಕಿಸುವ ಯೋಜನೆಗೆ ಸಂಬಂಧಿಸಿದಂತೆ ನಬಾರ್ಡ್ನಿಂದ 20 ಕೋಟಿ ರುಪಾಯಿ ನೆರವು ಕೋರಲಾಗಿದೆ. ಬಯಲು ಸೀಮೆ ಅಭಿವೃದ್ಧಿ ಮಂಡಳಿಗೆ ಸಂಬಂಧಿಸಿದ 68 ಕೋಟಿ ರು. ನೆರವಿನ ಪ್ರಸ್ತಾವನೆಯೂ ನಬಾರ್ಡ್ ಮುಂದಿದೆ. ಮೀನುಗಾರರಿಗೆ ಸುಂಕ ರಹಿತವಾಗಿ 50 ಸಾವಿರ ಲೀ. ಡೀಸೆಲ್ ಒದಗಿಸುವುದರಿಂದ ಸರ್ಕಾರಕ್ಕೆ 13 ಕೋಟಿ ರುಪಾಯಿ ನಷ್ಟವಾಗುತ್ತಿದೆ. ಹುಡ್ಕೋ ನೆರವಿನೊಂದಿಗೆ ಸರ್ಕಾರ ನಿರ್ಮಿಸುತ್ತಿರುವ 5 ಸಾವಿರ ಹೆಚ್ಚುವರಿ ಮನೆಗಳನ್ನು ಬಡ ಮೀನುಗಾರರಿಗೆ ಉಚಿತವಾಗಿ ಹಂಚಿಕೆ ಮಾಡಲಿದೆ ಎಂದರು.
ಮೀನುಗಾರಿಕೆಗಾಗಿ ಕೆರೆಗಳನ್ನು ಗುತ್ತಿಗೆ ನೀಡುವ ಪದ್ಧತಿಯನ್ನು ಪರಿಷ್ಕರಿಸಲು ಹಾಗೂ ಇಲಾಖೆಯ ನಿರ್ದೇಶಕರ ಕಚೇರಿಯನ್ನು ಬೆಂಗಳೂರಿನಿಂದ ಮಂಗಳೂರಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ರಮಾನಾಥ ರೈ ತಿಳಿಸಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications