ಆರ್ಟಿಪಿಎಸ್ ಬೂದಿ ಹೊಂಡ ಒಡೆದು 20ಲಕ್ಷಕ್ಕೂ ಹೆಚ್ಚು ಹಾನಿ
ರಾಯಚೂರು : ಇಲ್ಲಿನ ರಾಯಚೂರು ಶಾಖೋತ್ಪನ್ನ ಕೇಂದ್ರದ ಬೂದಿ ಹೊಂಡ ಒಡೆದು ಹೋಗಿರುವುದರಿಂದ ನೀರು ಬೂದಿ ರಭಸದಿಂದ ಕೃಷ್ಣಾ ನದಿಯತ್ತ ಹರಿಯುತ್ತಿದ್ದು, ಸುಮಾರು 20 ಲಕ್ಷ ರೂಪಾಯಿಗೂ ಹಾನಿಯಾಗಿರುವುದಲ್ಲದೆ ಸುತ್ತ ಮುತ್ತಲಿನ ಪರಿಸರದ ಮೇಲೂ ಪರಿಣಾಮ ಬೀರಿರುವುದಾಗಿ ವರದಿಯಾಗಿದೆ.
ಹರಿಯುತ್ತಿರುವ ನೀರು ಬೂದಿಯನ್ನು 24 ಗಂಟೆಯಾಳಗೆ ಅಂದರೆ ಮಂಗಳವಾರ ಸಂಜೆಯಾಳಗೆ ತಡೆಯಲು ಸಾಧ್ಯವಾಗದೇ ಇದ್ದರೆ ಆರ್ಟಿಪಿಎಸ್ನ ಐದು ಮತ್ತು ಆರನೇ ಘಟಕದ ಕೆಲಸವನ್ನು ಸ್ಥಗಿತಗೊಳಿಸಲಾಗುವುದು. ಬೂದಿ ಹೊಂಡದ ದುರಸ್ತಿಗೆ ಸುಮಾರು 14 ಲಕ್ಷ ರೂಪಾಯಿ ಖರ್ಚಾಗುವ ನಿರೀಕ್ಷೆ ಇದೆ ಎಂದು ಆರ್ಟಿಪಿಎಸ್ ಸಿಬ್ಬಂದಿ ಹೇಳಿದ್ದಾರೆ.
ನೀರು ಬೂದಿ ಕೃಷ್ಣಾ ನದಿಯನ್ನು ಸೇರಿದಲ್ಲಿ , ಕಲುಷಿತಗೊಂಡ ನೀರಿನಿಂದಾಗಿ ಜಲ ಚರ ಪ್ರಾಣಿಗಳಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಶಕ್ತಿ ನಗರ ಪಕ್ಕದ ಯಡ್ಲಾಪುರದ ಜನರೂ ಆತಂಕದ ಪರಿಸ್ಥಿತಿಯಲ್ಲಿದ್ದಾರೆ. ಬೂದಿ ಹೊಂಡ ಒಡೆದುಹೋಗಲು ಕಳಪೆ ಕಾಮಗಾರಿಯೇ ಕಾರಣ ಎಂದು ಶಂಕಿಸಲಾಗಿದೆ.
ವಿದ್ಯುತ್ ಉತ್ಪಾದನೆಯ ನಂತರ ಉಂಟಾಗುವ ತ್ಯಾಜ್ಯ ವಸ್ತು , ಕಲ್ಲಿದ್ದಲಿನ ಬೂದಿ(ಸ್ಲರಿ) ಗಾಳಿಯಲ್ಲಿ ಹಾರಿ ಹೋಗದಂತೆ ಅದನ್ನು ನೀರಿನಲ್ಲಿ ಬೆರೆಸಿ ಕೊಳವೆ ಮೂಲಕ ಆ್ಯಷ್ ಪಾಂಡ್ಗೆ ಹರಿಯಬಿಡಲಾಗುತ್ತದೆ. ಸುಮಾರು 300 ಅಡಿ ಎತ್ತರದ ಬೂದಿ ಹೊಂಡ ಒಡೆದು ಹೋಗಿರುವುದರಿಂದ ಸುತ್ತ ಮುತ್ತಲಿನ ಪ್ರದೇಶದಲ್ಲೆಲ್ಲಾ ಸ್ಲರಿ ತುಂಬಿಕೊಂಡಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications