3ನೇ ತರಗತಿಯಿಂದಲೇ ಇಂಗ್ಲಿಷ್ - ಸರ್ಕಾರದ ಪರಿಶೀಲನೆಯಲ್ಲಿ
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕಾನ್ವೆಂಟ್ ಹಾವಳಿ ತಡೆಗಟ್ಟಲು ರಾಜ್ಯಾದ್ಯಂತ ಶಿಶುವಿಹಾರ ತೆರೆಯುವ ಹಾಗೂ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಮೂರನೇ ತರಗತಿಯಿಂದಲೇ ಇಂಗ್ಲಿಷ್ ಪಠ್ಯ ಅಳವಡಿಸುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಈ ವಿಷಯವನ್ನು ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವನಾಥ್ ಮಂಗಳವಾರ ತಿಳಿಸಿದ್ದಾರೆ.
ಅಂಗನವಾಡಿಗಳು ಕಾನ್ವೆಂಟ್ಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಶಿಶುವಿಹಾರದ ಚಿಂತನೆ ಸರಕಾರಕ್ಕೆ ಮೂಡಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಂದಿನ ವರ್ಷ ಜೂನ್ 1ರಿಂದಲೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಕೊಠಡಿಗೊಬ್ಬ ಶಿಕ್ಷಕ ನೀತಿಗೆ ಅನುಗುಣವಾಗಿ ಸದ್ಯಕ್ಕೆ 15 ಸಾವಿರ ಶಿಕ್ಷಕರನ್ನು ನೇಮಿಸಲು ತೀರ್ಮಾನಿಸಲಾಗಿದೆ ಎಂದರು.
ಭೋದನೆಗೆ ವಿದ್ಯಾರ್ಹತೆಗಿಂತಲೂ ಹೆಚ್ಚಿನ ಅರ್ಹತೆಯ ಅಗತ್ಯವಿದೆ ಈ ನಿಟ್ಟಿನಲ್ಲಿ ಸಿಇಟಿ ಮಾದರಿಯಲ್ಲೇ ಶಿಕ್ಷಕರ ಆಯ್ಕೆ ಮಾಡಲಾಗುವುದು ಎಂದ ಅವರು, ಟಿ.ಸಿ.ಎಚ್ ವ್ಯಾಸಂಗಾವಧಿಯನ್ನು ಎರಡು ವರ್ಷದಿಂದ ಮೂರು ವರ್ಷಕ್ಕೆ ಏರಿಸುವ ಪ್ರಸ್ತಾಪ ಸರ್ಕಾರದ ಪರಿಶೀಲನೆಯಲ್ಲಿದೆ ಎಂದೂ ತಿಳಿಸಿದರು. ಶಿಕ್ಷಣ ವ್ಯವಸ್ಥೆಗೆ ಸಮಗ್ರ ಸುಧಾರಣೆ ತರಲು ಶಿಕ್ಷಣ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆದಿದೆ ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications