ಕಲುಷಿತ ನೀರು : ಮತ್ತೆ 17 ಮಂದಿ ಆಸ್ಪತ್ರೆಗೆ
ಕೊರಟಗೆರೆ : ಪಟ್ಟಣದಲ್ಲಿ ಸರಬರಾಜಾಗುತ್ತಿರುವ ಕಲುಷಿತ ನೀರನ್ನು ಕುಡಿದ ಮತ್ತೂ 17ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೀರು ಕುಡಿದ ಗ್ರಾಮಸ್ಥರು ವಾಂತಿ - ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಶನಿವಾರದಿಂದಲೇ ಪಟ್ಟಣದಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು, ಈಗಾಗಲೇ 75ಕ್ಕೂ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಶನಿವಾರದಿಂದ ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾದವರು ಸಂಖ್ಯೆ ಹತ್ತಿರ ಹತ್ತಿರ ನೂರಕ್ಕೆ ಮುಟ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಬಗ್ಗೆ ವಿವರಗಳು ಸಿಕ್ಕಿಲ್ಲ. ನೀರನ್ನು ಕುದಿಸಿ ಕುಡಿಯುವಂತೆ ಕರಪತ್ರ ಹಂಚಿದ್ದರೂ, ಪ್ರಚಾರ ಕಾರ್ಯ ನಡೆದಿದ್ದರೂ ಏನೂ ಪ್ರಯೋಜನ ಆಗಿಲ್ಲ. ಹೊಟೆಲ್ಗಳಲ್ಲಿ ಕಡ್ಡಾಯವಾಗಿ ಬಿಸಿ ನೀರನ್ನೇ ಕೊಡಬೇಕು ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಆದೇಶಿಸಿದ್ದಾರೆ.
ಸಂತೆಯಲ್ಲಿ ನೀರು ಕುಡಿದ ಕೆಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ತಹಶೀಲ್ದಾರ್, ಪ.ಪಂ. ಅಧ್ಯಕ್ಷರು ಪಟ್ಟಣದಾದ್ಯಂತ ಸಂಚರಿಸಿ, ತೆರೆದ ಬಾವಿಗಳ ನೀರನ್ನು ಕುಡಿಯದಂತೆ, ಹಾಗೂ ಬಿಸಿ ನೀರನ್ನೇ ಬಳಸುವಂತೆ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಮುಖಪುಟ / ಊರು ಕೇರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications