9ರಂದು ವೀರಶೈವ ಜನಜಾಗೃತಿ ಸಮಾವೇಶ
ಬೆಂಗಳೂರು : ಜನಗಣತಿಯ ಪಟ್ಟಿಯಲ್ಲಿ ವೀರಶೈವ - ಲಿಂಗಾಯತ ಎಂದು ಬರೆಸುವಂತೆ ಜನಜಾಗೃತಿ ಮೂಡಿಸಲು ಅಖಿಲ ಭಾರತ ವೀರಶೈವ ಮಹಾಸಭಾ ನಡೆಸುತ್ತಿರುವ ಜನಜಾಗೃತಿ ವಾಹಿನಿ ಜಾಥಾ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದು, ಈ ಸಂಬಂಧ ಶನಿವಾರ ಬೃಹತ್ ಸಮಾವೇಶವೂ ನಡೆಯಲಿದೆ.
ಶನಿವಾರ ಬೆಳಗ್ಗೆ ಜಯದೇವ ಮುರುಘರಾಜೇಂದ್ರ ವಿದ್ಯಾರ್ಥಿ ನಿಲಯದಿಂದ ಆರಂಭವಾಗುವ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಲ್ಲೇಶ್ವರ ಆಟದ ಮೈದಾನದಲ್ಲಿ ಬಂದು ಸೇರಲಿದೆ ಎಂದು ಸಭಾದ ಪ್ರಧಾನ ಕಾರ್ಯದರ್ಶಿ ಎಚ್.ವಿ. ನಾಗೇಂದ್ರಪ್ಪ ತಿಳಿಸಿದ್ದಾರೆ.
ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶಿವಕುಮಾರ ಸ್ವಾಮಿಯವರ ಸಾನ್ನಿಧ್ಯದಲ್ಲಿ ನಡೆಯುವ ಈ ಸಮಾವೇಶದಲ್ಲಿ ನಾಡಿನ ಸುಮಾರು 50ಕ್ಕೂ ಹೆಚ್ಚು ಮಠಾಧೀಶರುಗಳು, ಸಚಿವರು ಹಾಗೂ ಶಾಸಕರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.
2001ರ ಜನಗಣತಿಯಲ್ಲಿ ವೀರಶೈವ - ಲಿಂಗಾಯತ ಎಂದೇ ಬರೆಸುವಂತೆ, ಆಮೂಲಕ ವೀರಶೈವ ಜನಾಂಗದ ಬಗ್ಗೆ ನಿಖರ ಮಾಹಿತಿ ದೊರೆಯುವಂತಾಗಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಈ ಸಂಬಂಧ ಕಳೆದ 25ರಿಂದ ಆರಂಭಗೊಂಡಿರುವ ಜಾಥಾ ಉಳವಿಯಿಂದ ಹೊರಟು ಬೆಳಗಾವಿ, ವಿಜಾಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಸಂಚರಿಸಿ ನಗರಕ್ಕೆ ಬಂದಿದ್ದು, ಇಲ್ಲಿಂದ ತುಮಕೂರಿಗೆ ತೆರಳಲಿದೆ ಎಂದೂ ಅವರು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications