ಎಲ್ಲೆಲ್ಲೂ ಪೊಲೀಸರೇ.. ದತ್ತ ಜಯಂತಿಗೆ ಭಕ್ತರ ಕೊರತೆ
ಚಿಕ್ಕಮಗಳೂರು : ಹಿಂದೆಂದೂ ಕಾಣದ ಬಿಗಿ ಪೊಲೀಸ್ ಬಂದೋಬಸ್ತಿನ ನಡುವೆ ದತ್ತ ಜಯಂತಿ ವಿಧಿವತ್ತಾದ ಪೂಜಾಕಾರ್ಯಗಳೊಂದಿಗೆ ಶುಕ್ರವಾರ ಬಾಬಾ ಬುಡನ್‌ಗಿರಿಯಲ್ಲಿ ಪ್ರಾರಂಭವಾಯಿತು.
ಆರಂಭಿಕ ಪೂಜೆಯಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಬಿ. ಚಂದ್ರೇಗೌಡ ಅವರು ದತ್ತ ಜಯಂತಿ ಉತ್ಸವ ಸಾಂಗವಾಗಿ ನೆರವೇರಲಿ ಎಂದು ಆಶಿಸಿದರು. ದತ್ತಪೀಠದಲ್ಲಿ ದತ್ತ ಪಾದುಕೆಗಳನ್ನಿಟ್ಟು ದೀಪ ಬೆಳಗಿಸುವುದರೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ದತ್ತಪೀಠದ ಎದುರಿನ ಕಟ್ಟೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಧ್ವಜಾರೋಹಣ ಮಾಡಲಾಯಿತು. ಅದೇ ಸಂದರ್ಭದಲ್ಲಿ ಮೃತ್ಯುಂಜಯ ಹೋಮ ಹಾಗೂ ಗಣ ಹೋಮಗಳನ್ನು ನಡೆಸಲಾಯಿತು. ಶನಿವಾರ ರುದ್ರಹೋಮ ಮತ್ತು ಭಾನುವಾರ ಸತ್ಯನಾರಾಯಣ ಹೋಮ ಹಾಗೂ ದತ್ತ ಹೋಮಗಳನ್ನು ನಡೆಸಲಾಗುವುದು.
ಚಳಿ ಹೊದ್ದ ಬೆಟ್ಟದಲ್ಲಿ ಪೊಲೀಸರ ಭಾರೀ ಬಂದೋಬಸ್ತ್ ಆಗಮಿಸಿದ್ದ ಭಕ್ತರ ಸಂಖ್ಯೆಗಿಂತ ಹೆಚ್ಚಾಗಿತ್ತು . ಕಾನೂನು ಸಚಿವರ ಪ್ರಕಾರ, ಭದ್ರತಾ ವ್ಯವಸ್ಥೆಗಳಿಗಾಗಿಯೇ ಸುಮಾರು 50 ಲಕ್ಷ ರುಪಾಯಿ ಖರ್ಚು ಮಾಡಲಾಗಿದೆ. ಕೊರೆಯುವ ಚಳಿಯ ಕಾರಣ ಭಕ್ತರ ಸಂಖ್ಯೆ ನೀರೀಕ್ಷೆಗಿಂತ ಕಡಿಮೆಯಿತ್ತು . ಜಿಲ್ಲಾಧಿಕಾರಿ ಕೆ.ಹೆಚ್.ಗೋಪಾಲಕೃಷ್ಣ ಗೌಡ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮೊಹಮದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್. ಮೂರ್ತಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ದತ್ತ ಪೀಠ- ದರ್ಗಾ ಅಭಿವೃದ್ಧಿಗೆ ಸಮಗ್ರ ಯೋಜನೆ
ಬಾಬಾ ಬುಡನ್‌ಗಿರಿಯ ದತ್ತಪೀಠ ಹಾಗೂ ದರ್ಗಾದ ಸಮಗ್ರ ಅಭಿವೃದ್ಧಿ ಗಾಗಿ ಯೋಜನೆಯಾಂದನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದರು.
ಬೆಟ್ಟವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರದ ನೆರವನ್ನು ಪಡೆಯಲು ಪ್ರಯತ್ನಿಸಲಾಗುವುದು. ಈಗಾಗಲೇ ಕುಡಿಯುವ ನೀರು ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಟ್ಟಕ್ಕೆ ಸಾಗುವ ರಸ್ತೆಯನ್ನು ಅಗಲವಾಗಿಸಲು 7.5 ಲಕ್ಷ ರುಪಾಯಿ ವೆಚ್ಚ ಮಾಡಲಾಗಿದೆ ಎಂದು ಚಂದ್ರೇಗೌಡ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications