ಮೊಬೈಲ್ ಬ್ಯಾಂಕಿಂಗ್: ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಹೊಸ ಹೆಜ್ಜೆ
ಬೆಂಗಳೂರು : ವೈರ್ಲೆಸ್ ಅಪ್ಲಿಕೇಷನ್ ಪ್ರೊಟೊಕಾಲ್(ವ್ಯಾಪ್) ಬಳಕೆಯಿಂದ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಪರಿಚಯಿಸುವುದರೊಂದಿಗೆ, ಈ ಸೇವೆಯನ್ನು ಪ್ರಾರಂಭಿಸಿದ ದೇಶದ ಮೊದಲ ಸಾರ್ವಜನಿಕ ವಲಯದ ಬ್ಯಾಂಕ್ ಎನ್ನುವ ಖ್ಯಾತಿಯನ್ನು ಇಂಡಿಯನ್ ಓವರ್ಸೀಸ್ ಬ್ಯಾಂಕ್ ತನ್ನದಾಗಿಸಿಕೊಂಡಿತು.
ಬ್ಯಾಂಕ್ನ ಅಧ್ಯಕ್ಷ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕ ಆರ್.ವಿ. ಶಾಸ್ತ್ರಿ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಬೆಂಗಳೂರಿನ ನಾಗರಿಕರ ಸೇವೆಗೆ ಶನಿವಾರ ಉದ್ಘಾಟಿಸಿದರು. ನಂತರ ಹೊಸ ಸೌಲಭ್ಯದ ಬಗ್ಗೆ ವಿವರಿಸಿದ ಶಾಸ್ತ್ರಿ , ಸೇವೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ, ವ್ಯಾಪ್ ಹೊಂದಿರುವ ಸೆಲ್ಯುಲರ್ ಫೋನ್ಗಳ ಮೂಲಕ ಗ್ರಾಹಕರು ತಮ್ಮ ವ್ಯವಹಾರವನ್ನು ತಿಳಿಯಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾರತೀಯ ಓವರ್ಸಿಸ್ ಬ್ಯಾಂಕ್ನ ಅಂತರ ಬ್ಯಾಂಕ್ ಸೇವೆಯನ್ನೂ ಉದ್ಘಾಟಿಸಲಾಯಿತು. ಬೆಂಗಳೂರಿನಲ್ಲಿರುವ 15 ಐಓಬಿ ಬ್ರಾಂಚ್ ಬ್ಯಾಂಕ್ಗಳಲ್ಲಿ ಈ ಸೇವೆ ಲಭ್ಯವಿದ್ದು, ದೇಶದಲ್ಲಿ ಈ ಸೌಲಭ್ಯವನ್ನು ಹೊಂದಿರುವ ಆರನೇ ನಗರ ಬೆಂಗಳೂರಾಗಲಿದೆ. ಈ ವರ್ಷ ಬ್ಯಾಂಕ್ನ ಠೇವಣಿ 40 ಸಾವಿರ ಕೋಟಿ ದಾಟಿದ್ದು, ಮುಂದಿನ ದಿನಗಳಲ್ಲಿ ಆನ್ಲೈನ್ ಮೂಲಕ ಷೇರು ಹಾಗೂ ಡಿಬೆಂಚರ್ಗಳ ವಾಣಿಜ್ಯಕ್ಕೂ ತೊಡಗುವ ಯೋಜನೆ ಬ್ಯಾಂಕ್ಗಿದೆ ಎಂದು ಶಾಸ್ತ್ರಿ ತಿಳಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications