ಆಸ್ಟ್ರೇಲಿಯಾಕ್ಕೆ ಬರಲು ಭಾರತ ಸಾಫ್ಟ್ವೇರ್ ತಜ್ಞರಿಗೆ ಆಹ್ವಾನ
ಬೆಂಗಳೂರು : ಭಾರತದ ಸಾಫ್ಟ್ವೇರ್ ತಂತ್ರಜ್ಞರ ಬುದ್ಧಿಗೆ ವಿದೇಶದಲ್ಲಿ ಬಂಗಾರದ ಬೆಲೆ ಇದೆ. ಅಮೆರಿಕಾ, ಜರ್ಮನಿಗಳಲ್ಲಿ ಇವರಿಗೆ ರತ್ನಗಂಬಳಿಯ ಸ್ವಾಗತವೂ ದೊರಕುತ್ತಿದೆ. ಈಗ ಭಾರತದ ತಂತ್ರಜ್ಞರ ಸೇವೆಯನ್ನು ಬಳಸಿಕೊಳ್ಳಲು ಆಸ್ಟ್ರೇಲಿಯಾ ಸಹ ಮುಂದಾಗಿದೆ.
ಹಾಲಿ ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯಾದ ಸಂಪರ್ಕ ಖಾತೆ ಸಚಿವರಾದ ಎ. ರಿಚರ್ಡ್ಸ್ ಆಲ್ಸನ್ ಅವರು ಭಾರತದ ಸಾಫ್ಟ್ವೇರ್ ತಂತ್ರಜ್ಞರಿಗೆ ನಮ್ಮ ದೇಶದ ಬಾಗಿಲು ತೆರೆದಿದೆ ಎಂದು ಪ್ರಕಟಿಸಿದ್ದಾರೆ. ಇತರ ದೇಶಗಳಲ್ಲಿರುವಂತೆ ತಮ್ಮ ದೇಶಕ್ಕೆ ಬರಲು ಕಾನೂನು ತೊಡಕಿಲ್ಲ ಎಂದಿರುವ ಅವರು, ಇದರ ಸದುಪಯೋಗ ಪಡೆಯಲು ಭಾರತದ ಸಾಫ್ಟ್ವೇರ್ ತಜ್ಞರಿಗೆ ಸಲಹೆ ಮಾಡಿದ್ದಾರೆ.
ಕೈಗಾರಿಕೆಗಳ ಅಭಿವೃದ್ಧಿಗೆ ಅತ್ಯವಶ್ಯಕವಾಗಿರುವ ಮಾಹಿತಿ ಮತ್ತು ತಂತ್ರಜ್ಞಾನ ಕುರಿತು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು. ಆಸ್ಟ್ರೇಲಿಯಾದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಮೊದಲು ಅವಕಾಶ ನೀಡುತ್ತೇವೆ. ಆದಾಗ್ಯೂ ಭಾರತೀಯ ತಂತ್ರಜ್ಞರಿಗೆ ನಮ್ಮಲ್ಲಿ ಮುಕ್ತ ಅವಕಾಶ ಇದೆ ಎಂದು ಅವರು ಹೇಳಿದರು.
ಆಸ್ಟ್ರೇಲಿಯಾದ ಸರಕಾರ ಮಾಹಿತಿ ತಂತ್ರಜ್ಞಾನಕ್ಕೆ ಆದ್ಯತೆ ನೀಡಿದೆ. ಭಾರತದ ಜತೆ ಗೂಡಿ ಜಂಟಿ ಉದ್ಯಮ ಸ್ಥಾಪಿಸಲೂ ಮುಂದಾಗಿದೆ ಎಂದು ಅವರು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications